ADVERTISEMENT

25 ವರ್ಷಗಳ ಹಿಂದೆ | ಪಾಕಿಸ್ತಾನದ ಜತೆ ರಾಜಿ ಪ್ರಶ್ನೆಯೇ ಇಲ್ಲ: ಪ್ರಧಾನಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 18:44 IST
Last Updated 7 ಜುಲೈ 2024, 18:44 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಪಾಕಿಸ್ತಾನದ ಜತೆ ರಾಜಿ ಪ್ರಶ್ನೆಯೇ ಇಲ್ಲ: ಪ್ರಧಾನಿ

ನವದೆಹಲಿ, ಜುಲೈ 7 (ಪಿಟಿಐ)– ಕಾರ್ಗಿಲ್‌ನಲ್ಲಿ ಅತಿಕ್ರಮಣಕಾರರ ವಿರುದ್ಧ ನಡೆಸುತ್ತಿರುವ ಸೇನಾ ಕಾರ್ಯಾಚರಣೆ ವಿಷಯದಲ್ಲಿ ಪಾಕಿಸ್ತಾನದ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಂದು ಇಲ್ಲಿ ಸ್ಪಷ್ಟಪಡಿಸಿದರು.

ವಾಸ್ತವ ನಿಯಂತ್ರಣ ರೇಖೆಯನ್ನು ಗೌರವಿಸಿ ಅತಿಕ್ರಮಣಕಾರರನ್ನು ವಾಪಸು ಪಡೆಯುವುದಾಗಿ ಪಾಕಿಸ್ತಾನ ನೀಡಿರುವ ವಾಗ್ದಾನದ ಫಲಿತಾಂಶವನ್ನು ಭಾರತ ಎದುರು ನೋಡುತ್ತಿದೆ. ಆದಾಗ್ಯೂ ಅತಿಕ್ರಮಣಕಾರರ ವಿರುದ್ಧದ ಕಾರ್ಯಾಚರಣೆ ಸ್ಥಗಿತಗೊಳಿಸು
ವುದಿಲ್ಲ ಎಂದು ಅವರು ಮುಖ್ಯಮಂತ್ರಿಗಳ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತಾ ತಿಳಿಸಿದರು.

ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರ ಮುಷ್ಕರ ಅಂತ್ಯ

ಬೆಂಗಳೂರು, ಜುಲೈ 7– ವೇತನ ತಾರತಮ್ಯ ನಿವಾರಣೆ ಹಾಗೂ ಐದನೇ ವೇತನದ ಆಯೋಗದ ಶಿಫಾರಸುಗಳ ಜಾರಿಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಕಳೆದ 10 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.