ADVERTISEMENT

25 ವರ್ಷಗಳ ಹಿಂದೆ: ಭ್ರಷ್ಟಾಚಾರದ ವಿರುದ್ಧ ಸಮರ; ಪ್ರಧಾನಿ ವಾಜಪೇಯಿ ಪಣ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 21:30 IST
Last Updated 16 ಅಕ್ಟೋಬರ್ 2024, 21:30 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ನವದೆಹಲಿ, ಅ. 16 (ಪಿಟಿಐ, ಯುಎನ್‌ಐ)– ಭಯೋತ್ಪಾದನೆ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಟ, ಚುನಾವಣಾ ಪದ್ಧತಿಯಲ್ಲಿ ಸಮಗ್ರ ಬದಲಾವಣೆ, ಆರ್ಥಿಕ ವಲಯದ ಕಾನೂನುಗಳಿಗೆ ತಿದ್ದುಪಡಿ ಮತ್ತು ತೆರಿಗೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿ ಆರ್ಥಿಕ ಅಭಿವೃದ್ಧಿಯನ್ನು ತ್ವರಿತಗೊಳಿಸುವುದಾಗಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇಂದು ದೇಶದ ಜನತೆ ಮುಂದೆ ಪಣ ತೊಟ್ಟಿದ್ದಾರೆ.

ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ‘ಹೆಮ್ಮೆಯ ಮತ್ತು ಶ್ರೀಮಂತ ಭಾರತವನ್ನು ನಿರ್ಮಾಣ ಮಾಡಲು ಇಂದಿನಿಂದಲೇ ನಮ್ಮ ಸರ್ಕಾರ ಬದ್ಧವಾಗಿದೆ. ಉತ್ತಮ ಸರ್ಕಾರವನ್ನು ನೀಡುವ ನಮ್ಮ ಉದ್ದೇಶಕ್ಕೆ ಯಾವುದೇ ಅಡೆತಡೆಗಳಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT