ADVERTISEMENT

25 ವರ್ಷಗಳ ಹಿಂದೆ | ದೇಶಾದ್ಯಂತ ಇಂದು ಮತ ಎಣಿಕೆಗೆ ವ್ಯಾಪಕ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 23:30 IST
Last Updated 5 ಅಕ್ಟೋಬರ್ 2024, 23:30 IST
25 ವರ್ಷಗಳ ಹಿಂದೆ..
25 ವರ್ಷಗಳ ಹಿಂದೆ..   

ನವದೆಹಲಿ, ಅ. 5(ಯುಎನ್‌ಐ)– ರಾಷ್ಟ್ರಾದ್ಯಂತ 5 ಹಂತಗಳಲ್ಲಿ ನಡೆದ ಲೋಕಸಭೆ ಹಾಗೂ 5 ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ ವ್ಯಾಪಕ ಸಿದ್ಧತೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರ ಬರಲು ಪ್ರಾರಂಭವಾಗಲಿದೆ.

ವಿದ್ಯುನ್ಮಾನ ಮತಯಂತ್ರ ಬಳಸಿದ್ದ 17 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಟ್ಟು 45 ಲೋಕಸಭಾ ಕ್ಷೇತ್ರಗಳ ಫಲಿತಾಂಶ ಉಳಿದ ಕ್ಷೇತ್ರ ಗಳಿಗಿಂತ ಮುಂಚಿತವಾಗಿ ಪ್ರಕಟ ವಾಗಲಿದೆ. ನಾಳೆ ಸಂಜೆ ಐದು ಗಂಟೆಯೊಳಗೆ ಈ 45 ಲೋಕಸಭಾ ಕ್ಷೇತ್ರಗಳ ಫಲಿತಾಂಶ ತಿಳಿದುಬರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT