ADVERTISEMENT

25 ವರ್ಷಗಳ ಹಿಂದೆ: ಬುಧವಾರ ಮತ್ತೆ ಅಟಲ್ ಸರ್ಕಾರ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2024, 23:30 IST
Last Updated 7 ಅಕ್ಟೋಬರ್ 2024, 23:30 IST
25 ವರ್ಷಗಳ ಹಿಂದೆ11.12.1996
25 ವರ್ಷಗಳ ಹಿಂದೆ11.12.1996   

ನವದೆಹಲಿ, ಅ. 7– ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟವು 290ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಸರಳ ಬಹುಮತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮುಂದಾಳುತನದ ಸರ್ಕಾರ ಬುಧವಾರ ಮತ್ತೆ ಅಧಿಕಾರಕ್ಕೆ ಬರುವುದು ಸ್ಪಷ್ಟವಾಗಿದೆ.

ಬಿಜೆಪಿಯ ನೂತನ ಲೋಕಸಭೆ ಸದಸ್ಯರು ಭಾನುವಾರ ಬೆಳಿಗ್ಗೆ ಸೇರಿ ನಂತರ ಮಧ್ಯಾಹ್ನ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ನೂತನ ಸಂಸದೀಯ ಪಕ್ಷದ ಸಭೆಯು ಪ್ರಧಾನಿ ವಾಜಪೇಯಿ ಅವರನ್ನು ವಿಧಿವತ್ತಾಗಿ ತನ್ನ ನಾಯಕನನ್ನಾಗಿ ಆಯ್ಕೆ ಮಾಡಲಿದೆ.

ಕೃಷ್ಣ ಮುಖ್ಯಮಂತ್ರಿ: ಬಹುತೇಕ ಖಚಿತ

ADVERTISEMENT

ಬೆಂಗಳೂರು, ಅ. 7– ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಸ್.ಎಂ. ಕೃಷ್ಣ ಅವರೇ ರಾಜ್ಯದ ನೂತನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ.

ವಿಧಾನಸಭೆಯ 224 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷವು 132 ಸ್ಥಾನಗಳನ್ನು ಗೆದ್ದು ನಿಚ್ಚಳ ಬಹುಮತ ಗಳಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಚಾಲನೆ ದೊರೆತಿದೆ. ಮುಖ್ಯಮಂತ್ರಿ ಯಾರಾಗಬಹುದು ಎಂಬ ಬಗ್ಗೆ ಚರ್ಚೆ ಈಗಾಗಲೇ ಆರಂಭವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.