ADVERTISEMENT

25 ವರ್ಷಗಳ ಹಿಂದೆ | ಎನ್‌ಡಿಎ ಸರ್ಕಾರಕ್ಕೆ ಬೆಂಬಲ: ರಾಷ್ಟ್ರಪತಿಗೆ ಟಿಡಿಪಿ ಪತ್ರ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 23:30 IST
Last Updated 8 ಅಕ್ಟೋಬರ್ 2024, 23:30 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಹೈದರಾಬಾದ್, ಅ. 8– ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸರ್ಕಾರಕ್ಕೆ ಬೆಂಬಲ ನೀಡುವುದನ್ನು ತೆಲುಗುದೇಶಂ ಪಕ್ಷ, ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರಿಗೆ ಇಂದು ಔಪಚಾರಿಕವಾಗಿ ತಿಳಿಸಿತು.

ತೆಲುಗುದೇಶಂ ಪಕ್ಷದ ಅಧ್ಯಕ್ಷ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಷ್ಟ್ರಪತಿ ನಾರಾಯಣನ್ ಅವರಿಗೆ ಪತ್ರವನ್ನು ಬರೆದು ಈ ನಿರ್ಧಾರವನ್ನು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ

ADVERTISEMENT

ಬೆಂಗಳೂರು, ಅ. 8– ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಿಚ್ಚಳ ಬಹುಮತ ಗಳಿಸಿದ ನಂತರ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರದಲ್ಲಿ ಪಕ್ಷದ ಹಿರಿಯ ಮುಖಂಡರು ಬಾಯಿ ಬಿಚ್ಚಿ ಮಾತನಾಡಲು ಪ್ರಾರಂಭಿಸಿದ್ದು ಇದರೊಂದಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಮುಖಂಡರ ನಡುವೆ ನಡೆಯುತ್ತಿರುವ ಸ್ಪರ್ಧೆ ಕಾವೇರುತ್ತಿದೆ.

ನಾಯಕನ ಆಯ್ಕೆಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಭಾನುವಾರ ನಡೆಯಲಿದ್ದು ಕಾಂಗ್ರೆಸ್ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.