ಗುಮಾಸ್ತರು, ರೆವಿನ್ಯೂ ಇನ್‌ಸ್ಪೆಕ್ಟರ್‌ಗಳ ತರಬೇತಿಗೆ ಶಾಲೆಗಳು
ಬೆಂಗಳೂರು, ನ. 15– ಪ್ರಥಮ ದರ್ಜೆ, ದ್ವಿತೀಯ ದರ್ಜೆ ಗುಮಾಸ್ತರು ಹಾಗೂ ರೆವಿನ್ಯೂ ಇನ್‌ಸ್ಪೆಕ್ಟರ್‌ಗಳಂಥ ಸಿಬ್ಬಂದಿಯನ್ನು ಅವರ ಕೆಲಸದಲ್ಲಿ ಶಾಸ್ತ್ರೀಯ ರೀತಿಯಲ್ಲಿ ತರಬೇತಿಗೊಳಿಸುವ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ಸಚಿವ ಸಂಪುಟ ಇಂದು ಕೈಗೊಂಡ ನಿರ್ಧಾರದ ಪ್ರಕಾರ, ಪ್ರಾರಂಭಿಕವಾಗಿ ಬೆಂಗಳೂರು, ಮೈಸೂರು, ಧಾರವಾಡ ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ನಾಲ್ಕು ತರಬೇತಿ ಕೇಂದ್ರಗಳು ಆರಂಭವಾಗಲಿವೆ.
ಈ ಕಾರ್ಯಕ್ರಮಕ್ಕೆ ತಗಲುವ ಅಂದಾಜು ವೆಚ್ಚ ಸುಮಾರು 3.36 ಲಕ್ಷ ರೂಪಾಯಿಗಳು. ಅಂತಿಮವಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೂ ಇಂಥ ಕೇಂದ್ರಗಳ ಸ್ಥಾಪನೆ ಸರ್ಕಾರದ ಉದ್ದೇಶ ಎಂದು ವಕ್ತಾರರು ವರದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.