ADVERTISEMENT

ಉತ್ತಮ ಶಿಫಾರಸು

ಪ್ರೊ.ಸಿ.ಸಿದ್ದರಾಜು ಆಲಕೆರೆ
Published 8 ಸೆಪ್ಟೆಂಬರ್ 2017, 19:30 IST
Last Updated 8 ಸೆಪ್ಟೆಂಬರ್ 2017, 19:30 IST

ರಾಜ್ಯದ ಎಲ್ಲ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ವರದಿಯಾಗಿದೆ.

ರಾಜ್ಯದಲ್ಲಿ ಒಂದೊಂದಾಗಿ ಮುಚ್ಚುತ್ತಿರುವ ಕನ್ನಡ ಶಾಲೆಗಳನ್ನು ಉಳಿಸಿ– ಬೆಳೆಸುವ ನಿಟ್ಟಿನಲ್ಲಿ ಈ ಶಿಫಾರಸು ಅತ್ಯಂತ ಮಹತ್ವದ್ದು. ಕನ್ನಡ ಆಡಳಿತ ಭಾಷೆಯಾಗುವುದರ ಜೊತೆಗೆ ಅನ್ನ ನೀಡುವ ಭಾಷೆಯೂ ಆಗಬೇಕು. ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ಪೂರೈಸಿದವರಿಗೇ ಸರ್ಕಾರಿ ಉದ್ಯೋಗಗಳನ್ನು ಮೀಸಲಿಡಬೇಕು.

ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಮಾತ್ರವಲ್ಲ, ಸರ್ಕಾರದ ‘ಅನ್ನಭಾಗ್ಯ’ ಯೋಜನೆಯ ಅನುಕೂಲ ಪಡೆಯುತ್ತಿರುವ ಕುಟುಂಬಗಳ ಸದಸ್ಯರು ಕೂಡ ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಸೇರಿಸಬೇಕೆಂದು ಕಾಯ್ದೆ ತರುವುದು ಸೂಕ್ತ. ಆಗಮಾತ್ರ ಕನ್ನಡ ಶಾಲೆಗಳು ಉಳಿಯುತ್ತವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.