ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದರೂ, ಭಾರತದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಕರಗಳು ಸೇರ್ಪಡೆಯಾಗಿ ತೈಲ ಬೆಲೆ ಏರಿಕೆ ಆಗುತ್ತಲೇ ಇದೆ. ತೈಲ ಬೆಲೆಯನ್ನು ನಿಯಂತ್ರಣಮುಕ್ತಗೊಳಿಸಿದ ನಂತರ ದಿನನಿತ್ಯ ದರ ಪರಿಷ್ಕರಣೆಯಾಗುತ್ತಾ, ಗ್ರಾಹಕರಿಗೆ ಅರಿವಿಲ್ಲದಂತೆಯೇ ಏರಿಕೆ ಆಗುತ್ತಿರುತ್ತದೆ.
ರಾಷ್ಟ್ರದಾದ್ಯಂತ ಜಿಎಸ್‌ಟಿ ವ್ಯವಸ್ಥೆ ಜಾರಿಯಾಗಿದ್ದು ತೈಲವನ್ನೂ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಬೆಲೆಯು ಇಳಿದು ಗ್ರಾಹಕರಿಗೆ ಅನುಕೂಲವಾಗುತ್ತದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.