ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಶಿವಮೊಗ್ಗ ಮತ್ತು ಮೈಸೂರನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಏನು ಮಾನದಂಡ ಎಂದು ಮೋನಿಕ ಆರ್. ಪ್ರಶ್ನೆ ಮಾಡಿದ್ದಾರೆ (ವಾ.ವಾ., ಮಾರ್ಚ್ 12). ಉತ್ತರ ಕರ್ನಾಟಕದ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಈಗಾಗಲೇ ಕ್ಯಾನ್ಸರ್ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಹಿಂದಿನ ಆಯವ್ಯಯಗಳಲ್ಲಿ ಕಲಬುರ್ಗಿ ಮತ್ತು ಕಾರವಾರಕ್ಕೆ ಕ್ಯಾನ್ಸರ್ ಕೇಂದ್ರಗಳು ಮಂಜೂರಾಗಿವೆ. ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.
ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಗಣನೀಯವಾಗಿ ಏರಿದ್ದು, ಸರ್ಕಾರಿ ಸ್ವಾಮ್ಯದ ಕ್ಯಾನ್ಸರ್ ಕೇಂದ್ರ ತೆರೆಯಬೇಕೆಂಬ ಬೇಡಿಕೆ ಏಳೆಂಟು ವರ್ಷಗಳಿಂದ ಚಾಲ್ತಿಯಲ್ಲಿದೆ. ಆದ್ದರಿಂದ ಈ ನಗರಗಳಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ತೆರೆಯುವ ಸರ್ಕಾರದ ನಿರ್ಧಾರ ಸಮಂಜಸವಾಗಿದೆ.
–ಡಾ. ಕೆ.ಎಸ್.ಗಂಗಾಧರ, ಶಿವಮೊಗ್ಗ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.