ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ನಕಲಿ ವೈದ್ಯರು ಸರ್ಕಾರದ ಕಣ್ಣು ತಪ್ಪಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೊನಾ ಸೋಂಕು ವ್ಯಾಪಿಸುತ್ತಿರುವಂತಹ ಗಂಭೀರ ಪರಿಸ್ಥಿತಿಯಲ್ಲೂ ಅವರು ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಅನ್ವಯಿಸಿಕೊಳ್ಳದೆ ರೋಗಿಗಳನ್ನು ತಪಾಸಣೆಗೆ ಒಳಪಡಿಸುವುದು ಎಷ್ಟು ಸರಿ?
ತಮ್ಮ ಬಳಿ ಬರುವ ರೋಗಿಗಳನ್ನು ಅವರು ಹತ್ತಿರದ ಅಧಿಕೃತ ವೈದ್ಯರ ಬಳಿ ಕಳುಹಿಸಿಕೊಟ್ಟು, ರೋಗಿಗಳಲ್ಲಿ ಜಾಗೃತಿ ಮೂಡಿಸುವ ಮೂಲಕ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಂತಹ ವಿಚಾರಗಳನ್ನು ಸರ್ಕಾರ ಸಹ ಗಂಭೀರವಾಗಿ ಪರಿಗಣಿಸಿ, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಜರುಗಿಸಬೇಕು.
-ಸುನೀಲ್ ಪಾಟೀಲ್, ನಾಗೇಶನಹಳ್ಳಿ, ಕೊಪ್ಪಳ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.