ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಮತ್ತು ದ್ವೇಷ ಭಾಷಣ ಹರಡುವುದನ್ನು ತಡೆಯಲು ಶ್ರೀಲಂಕಾ ಸರ್ಕಾರ ಹೊಸ ಕಾನೂನು ರೂಪಿಸಿದೆ. ಇದರ ಅನ್ವಯ, ಸುಳ್ಳುಸುದ್ದಿ ಹಬ್ಬಿಸಿದವರಿಗೆ 5 ವರ್ಷ ಜೈಲು ಶಿಕ್ಷೆ ಮತ್ತು ಸುಮಾರು ₹ 4 ಲಕ್ಷದಷ್ಟು ದಂಡ ವಿಧಿಸುವ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ. ಸಿಂಗಪುರದಲ್ಲಿ ತಿಂಗಳ ಹಿಂದೆಯೇ ಇಂಥದ್ದೊಂದು ಕಾನೂನನ್ನು ಜಾರಿಗೆ ತಂದು, 10 ವರ್ಷ ಜೈಲು ಶಿಕ್ಷೆ ಹಾಗೂ ಅಧಿಕ ಮೊತ್ತದ ದಂಡ ವಿಧಿಸಲು ಅವಕಾಶ ನೀಡಲಾಗಿದೆ.
ಇಂತಹುದೊಂದು ಕಾನೂನಿನ ಅಗತ್ಯ ನಮ್ಮಲ್ಲೂ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವೇಚನೆಯಿಲ್ಲದೆ ಸುಳ್ಳುಸುದ್ದಿಗಳನ್ನು ಹಬ್ಬಿಸುವ ಮತ್ತು ಕೋಮು ಭಾವನೆ ಕೆರಳಿಸುವ ಜನರಿಗೆ ತಕ್ಕ ಶಿಕ್ಷೆ ಆಗಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.