ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಟ್ಟಿದ್ದುದು ಸಜೀವ ಬಾಂಬ್ ಅಲ್ಲ, ಪಟಾಕಿ ಪುಡಿ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿರುವುದಾಗಿ ವರದಿಯಾಗಿದೆ (ಪ್ರ.ವಾ., ಜ. 22). ಅದು ಪಟಾಕಿ ಪುಡಿ ಎಂಬ ನಿರ್ಧಾರಕ್ಕೆ ಬರಲು ಕಾರಣವಾದ ಖಚಿತ ಸಾಕ್ಷ್ಯಾಧಾರಗಳು ತಮ್ಮ ಬಳಿ ಇದ್ದರೆ ಅವರು ತನಿಖಾ ಸಂಸ್ಥೆಗೆ ಅದನ್ನು ನೀಡಬೇಕು.
ಆಗ ಈ ಸಂಬಂಧದ ತನಿಖೆ ಸುಗಮವಾಗಿ ನಡೆಯಲು ಸಹಕಾರಿಯಾಗುತ್ತದೆ ಮತ್ತು ಅವರ ಹೇಳಿಕೆಗೂ ಮಹತ್ವ ದೊರೆಯುತ್ತದೆ. ಇದು ದೇಶದ ಭದ್ರತೆ ಮತ್ತು ಜನರ ಪ್ರಾಣಕ್ಕೆ ಸಂಬಂಧಿಸಿದ ವಿಷಯ. ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವವರು ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಬಿಡುಬೀಸಾಗಿ ಹೇಳಿಕೆ ನೀಡಿದರೆ ಸಾರ್ವಜನಿಕ`ರಲ್ಲಿ ಮತ್ತಷ್ಟು ಗೊಂದಲ ಉಂಟಾಗುತ್ತದೆ.
ಇಂತಹ ಸೂಕ್ಷ್ಮ ವಿಚಾರಗಳು ಹೇಳಿಕೆಗಳು, ಪ್ರತಿಹೇಳಿಕೆಗಳು ಮತ್ತು ರಾಜಕೀಯ ಮೇಲಾಟಕ್ಕೆ ವೇದಿಕೆಯಾಗಬಾರದು.
–ಪುಟ್ಟೇಗೌಡ, ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.