ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಸ್ಫೋಟಕ ಪತ್ತೆಯಾದ ಬಳಿಕ, ಭದ್ರತಾ ಪಡೆ ಹಾಗೂ ಪೊಲೀಸ್ ತನಿಖೆಯ ಬಗ್ಗೆ ರಾಜ್ಯದ ರಾಜಕಾರಣಿಯೊಬ್ಬರು ಉಡಾಫೆಯ ಮಾತುಗಳನ್ನಾಡುತ್ತಿರುವುದು ಅವರಿಗೆ ಶೋಭೆ ತರುವ ವಿಚಾರವಲ್ಲ.
ಈ ಹಿಂದಿನ ಮಂಗಳೂರು ಪ್ರತಿಭಟನೆಯ ಸಂದರ್ಭದಲ್ಲೂ ಕೆಲವರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಬೇಜವಾಬ್ದಾರಿಯುತ ಹೇಳಿಕೆಗಳು ಕೇಳಿಬಂದಿದ್ದವು. ಇದು ದೇಶದ ಭದ್ರತೆಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ ಮತ್ತು ಯಾವುದೇ ರಾಜಕಾರಣಿಗೆ ಗೌರವ ತರುವುದಿಲ್ಲ.
ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಶಂಕಿತ ವ್ಯಕ್ತಿಗೆ ನೆರವು ನೀಡಿದ ಕಾಣದ ಕೈಗಳಿಗೆ ಹೆಡೆಮುರಿ ಕಟ್ಟುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕಾಗಿದೆ.
–ಆದರ್ಶ್ ಶೆಟ್ಟಿ ಕಜೆಕ್ಕಾರ್,ಉಪ್ಪಿನಂಗಡಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.