ಬೆಂಗಳೂರಿನ ರಸ್ತೆಗುಂಡಿಗಳಿಗೆ ಮುಕ್ತಿ ದೊರಕಿಸುವಂತೆ ಕರ್ನಾಟಕ ಹೈಕೋರ್ಟ್ ಹಲವು ಬಾರಿ ಬೃಹತ್ ಬೆಂಗಳೂರು ಮಹಾನಗರಪಾಲಿಕೆಗೆ (ಬಿಬಿಎಂಪಿ) ಎಚ್ಚರಿಕೆ ನೀಡಿ, ಛೀಮಾರಿ ಹಾಕಿದ್ದರೂ ಪ್ರಯೋಜನವಾಗಿಲ್ಲ. ಅಷ್ಟೇ ಅಲ್ಲ, ರಸ್ತೆಗುಂಡಿ ಮುಚ್ಚಲು ಮಳೆ ಅವಕಾಶವನ್ನೇ ನೀಡುತ್ತಿಲ್ಲ ಎಂದು ನಮ್ಮ ಸಚಿವರೊಬ್ಬರು ಈಚೆಗೆ ಬೇಜವಾಬ್ದಾರಿಯ ಹೇಳಿಕೆಯನ್ನೂ ನೀಡಿದ್ದರು.
ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಸಂಚರಿಸಲಿರುವ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ರಸ್ತೆಗುಂಡಿಗಳನ್ನು ಮುಚ್ಚಿ, ಅಬ್ಬಾ ಎಂಥ ಅದ್ಭುತ ರಸ್ತೆಗಳಿವೆ ಎನಿಸುವಂತೆ ಮಾಡಲು ಯತ್ನಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಅದೂ ಆ ರಸ್ತೆಗಳು ಕೇವಲ ವಾರಕ್ಕೋ ಹದಿನೈದು ದಿನಗಳಿಗೋ ಹಾಳಾಗುವಂತಹ ಗುಣಮಟ್ಟ ದಲ್ಲಿ ಕೆಲಸ ಮಾಡಿ, ಜನಸಾಮಾನ್ಯರ ತೆರಿಗೆ ಹಣವನ್ನು ಪೋಲು ಮಾಡುವುದು ಯಾವ ನ್ಯಾಯ?
–ಮಲ್ಲತ್ತಹಳ್ಳಿ ಡಾ. ಎಚ್. ತುಕಾರಾಂ, ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.