ADVERTISEMENT

ನೇಮಕಾತಿ ಪ್ರಕ್ರಿಯೆ ಬದಲಾಗಲಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 11 ಜನವರಿ 2019, 17:14 IST
Last Updated 11 ಜನವರಿ 2019, 17:14 IST

ವಿಶ್ವವಿದ್ಯಾಲಯಗಳ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶ ಹೋರಡಿಸಿರುವುದು ಒಳ್ಳೆಯ ಬೆಳವಣಿಗೆ. ವಿಶ್ವವಿದ್ಯಾಲಯಗಳು ನೇಮಕಾತಿ ಪ್ರಾಧಿಕಾರಗಳಲ್ಲ. ಹೀಗಿರುವಾಗ ಅವು ಯಾವ ಮಾನದಂಡವಿಟ್ಟುಕೊಂಡು ನೇಮಕಾತಿ ನಡೆಸುತ್ತವೆ?

ರಾಜ್ಯದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕರನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿಯೇ ವಿ.ವಿ.ಗಳಲ್ಲಿ ಖಾಲಿಯಿರುವ ಹುದ್ದೆಗಳಿಗೂ ಅಧಿಸೂಚನೆ ಹೊರಡಿಸಿ, ರಾಜ್ಯದಾದ್ಯಂತ ಏಕರೀತಿಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸಬೇಕು.

ಮೆರಿಟ್ ಹಾಗೂ ವಿಶೇಷ ಅರ್ಹತೆಯ ಆಧಾರದ ಮೇಲೆ ವಿ.ವಿ.ಗಳಿಗೆ ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಳ್ಳಬೇಕು. ಹೀಗಾದರೆ ಮಾತ್ರ ವಿ.ವಿ.ಗಳ ನೇಮಕಾತಿಯಲ್ಲಾಗುವ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಧಿಕಾರ ದುರುಪಯೋಗವನ್ನು ನಿಯಂತ್ರಿಸಲು ಸಾಧ್ಯ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.