ADVERTISEMENT

ವಸತಿ ಸಮಸ್ಯೆ ನಿವಾರಿಸಿ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2018, 20:00 IST
Last Updated 2 ಡಿಸೆಂಬರ್ 2018, 20:00 IST

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 1, 3 ಮತ್ತು 5ನೇ ಸೆಮಿಸ್ಟರ್‌ ಪರೀಕ್ಷೆಗಳ ಮೌಲ್ಯಮಾಪನ ಕಾರ್ಯ ಬೆಳಗಾವಿಯಲ್ಲಿ ನಡೆಯುತ್ತಿದೆ. ಈ ತಿಂಗಳ 10ರಿಂದ ಇಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಯಲಿರುವುದರಿಂದ ಈಗ ಮೌಲ್ಯಮಾಪಕರಿಗೆ ವಸತಿ ಸಮಸ್ಯೆ ಎದುರಾಗಿದೆ. ಅಧಿವೇಶನಕ್ಕೆ ಬರುವ ಸಿಬ್ಬಂದಿಗಾಗಿ ಬೆಳಗಾವಿಯ ಎಲ್ಲ ವಸತಿ ಗೃಹಗಳ ಕೊಠಡಿಗಳನ್ನು ಕಾಯ್ದಿರಿಸಿ ಜಿಲ್ಲಾಧಿಕಾರಿ ನೋಟಿಸ್‌ ಜಾರಿ ಮಾಡಿದ್ದಾರೆ. ಇದರಿಂದಾಗಿ ಮೌಲ್ಯಮಾಪನಕ್ಕೆ ಬಂದಿರುವ ಶಿಕ್ಷಕರಿಗೆ ಕೊಠಡಿಗಳು ಸಿಗುತ್ತಿಲ್ಲ. ಈ ಸಮಸ್ಯೆಗೆ ಪರಿಹಾರ ಕಂಡುಕೊಂಡು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಹಿತ ಕಾಪಾಡುವುದು ಸಹ ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ.

–ವಿ.ಜಿ. ಇನಾಮದಾರ, ಸಾರವಾಡ, ವಿಜಯಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT