ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ಎಲ್ಲ ವಯೋಮಾನದ ಸ್ತ್ರೀಯರ ಪ್ರವೇಶಕ್ಕೂ ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಪಾಲಿಸಲು ಎಲ್ಲ ರಾಜಕೀಯ ಪಕ್ಷಗಳೂ ಸಹಕರಿಸಬೇಕು. ಸಂಪ್ರದಾಯದ ನೆಪದಲ್ಲಿ ಈಗ ನಡೆಯುತ್ತಿರುವ ಹೋರಾಟವು ರಾಜಕೀಯ ಸ್ವರೂಪ ಪಡೆದಿರುವುದು ದುರದೃಷ್ಟಕರ ಸಂಗತಿ.
ಕಾಲಕ್ಕೆ ತಕ್ಕಂತೆ ಸಂಪ್ರದಾಯಗಳೂ ಬದಲಾಗಬೇಕು. ಸೃಷ್ಟಿಕರ್ತ ದೇವರಿಗೆ ಸ್ತ್ರೀ–ಪುರುಷ ಎಂಬ ಭೇದಭಾವ ಇಲ್ಲ. ಸಂಪ್ರದಾಯ ಬದಲಾದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ. ಹೋರಾಟಗಾರರು ಆತ್ಮಾವಲೋಕನ ಮಾಡಿಕೊಂಡು ಮಹಿಳೆಯರ ಹಕ್ಕುಗಳನ್ನು ಗೌರವಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.