ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿದೆ. ಇವರು ಕಾಯಂ ಶಿಕ್ಷಕರಂತೆ ಶಾಲಾ ಅವಧಿ ಮುಗಿಯುವವರೆಗೂ ಕಾರ್ಯ ನಿರ್ವಹಿಸುತ್ತಾರೆ. ಬೋಧನಾ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತಾರೆ. ಕೆಲವು ದಿನಗಳ ಹಿಂದೆ ಇವರಿಗೆ ತರಬೇತಿ ನೀಡಲು ಸಹ ಆದೇಶ ಹೊರಡಿಸಲಾಗಿದೆ. ಹೆಚ್ಚುಕಮ್ಮಿ ದಿನದ ಸಮಯವನ್ನು ಅವರು ಅಲ್ಲಿಯೇ ಕಳೆಯುತ್ತಾರೆ. ಬೇರೆ ಕೆಲಸದಲ್ಲಿ ತೊಡಗಿಸಿಕೊಳ್ಳಲು ಆಗುವುದಿಲ್ಲ. ಆದರೆ ಸರ್ಕಾರ ಇವರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ₹ 7,500, ಪ್ರೌಢಶಾಲಾ ಶಿಕ್ಷಕರಿಗೆ ₹ 8,000 ವೇತನವನ್ನು ಮಾತ್ರ ನೀಡುತ್ತದೆ. ಇಂದಿನ ಬೆಲೆ ಏರಿಕೆಯ ದಿನಮಾನದಲ್ಲಿ ಈ ಹಣ ಏನೇನೂ ಸಾಲದು. ಇವರಲ್ಲಿನ ಒಗ್ಗಟ್ಟಿನ ಕೊರತೆಯಿಂದ ಇದನ್ನು ಸರ್ಕಾರದ ಗಮನಕ್ಕೆ ತರಲು ಸಹ ಆಗುತ್ತಿಲ್ಲ. ಇವರ ವೇತನ ಹೆಚ್ಚಳದ ಬಗ್ಗೆ ಸರ್ಕಾರ ಗಮನಹರಿಸಬೇಕು.
–ಸಣ್ಣಮಾರಪ್ಪ, ಚಂಗಾವರ, ಶಿರಾ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.