ADVERTISEMENT

ವಾಚಕರ ವಾಣಿ: ಲೋಪದೋಷ ಮೊದಲು ಸರಿಯಾಗಲಿ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2022, 19:30 IST
Last Updated 11 ನವೆಂಬರ್ 2022, 19:30 IST

ಕ್ರೈಸ್ತ ಮತ್ತು ಇಸ್ಲಾಂ ಧರ್ಮಗಳಿಗೆ ಮತಾಂತರಗೊಂಡ ದಲಿತರಿಗೆ ಮೀಸಲಾತಿ ಸೌಲಭ್ಯ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿರುವುದು (ಪ್ರ.ವಾ., ನ. 11) ಅದರ ಸರ್ವಾಧಿಕಾರಿ ಧೋರಣೆಯನ್ನು ಪ್ರತಿ ಬಿಂಬಿಸುತ್ತದೆ. ಹಿಂದೂ ಧರ್ಮದಲ್ಲಿದ್ದಾಗ ಅನುಭವಿಸಿದ್ದಕ್ಕಿಂತ ಹೆಚ್ಚಿನ ದೌರ್ಜನ್ಯವನ್ನು ಕ್ರೈಸ್ತ ಮತ್ತು ಇಸ್ಲಾಂ ಧರ್ಮದಲ್ಲಿ ದಲಿತರು ಎದುರಿಸುತ್ತಿದ್ದಾರೆ ಎಂಬುದಕ್ಕೆ ದಾಖಲೆ ಲಭ್ಯವಿಲ್ಲ ಎಂದು ಹೇಳುವ ಮೂಲಕ, ಹಿಂದೂ ಧರ್ಮದಲ್ಲಿ ದಲಿತರಿಗೆ ಸಂಬಂಧಿಸಿದಂತೆ ಇರುವ ಲೋಪದೋಷಗಳನ್ನು ಸರ್ಕಾರ ಬಹಿರಂಗವಾಗಿ ಒಪ್ಪಿಕೊಂಡಿದೆ.

ತಾರತಮ್ಯದಂತಹ ಲೋಪದೋಷಗಳನ್ನು ಸರಿಪಡಿಸಿದರೆ, ದಲಿತರು ಹಿಂದೂ ಧರ್ಮದಿಂದ ಇತರ ಧರ್ಮ ಗಳಿಗೆ ಮತಾಂತರಗೊಳ್ಳುವುದು ತಪ್ಪುತ್ತದೆ. ಮುಂದೆ ಅವರಿಗೆ ಮೀಸಲಾತಿ ಸೌಲಭ್ಯಗಳನ್ನು ಮುಂದುವರಿಸುವ ಅಗತ್ಯವೂ ಇರುವುದಿಲ್ಲ.

ಎಲ್.ಚಿನ್ನಪ್ಪ, ಬೆಂಗಳೂರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.