ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನದ ಗೌರವ ಪ್ರಾಪ್ತವಾಗಿರುವುದು ಅನಿರೀಕ್ಷಿತವೇನಲ್ಲ. ಹಿಂದೆ ಹಾಸನದ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರೌಢಶಾಲೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಶೈಕ್ಷಣಿಕ ಕಾರ್ಯಾಗಾರಗಳನ್ನು ನಡೆಸಿ, ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆ, ಸೂಚನೆ ಪಡೆದು, ಸಮಾಲೋಚನೆಯ ಮೂಲಕ ವಿಮರ್ಶಿಸಿ, ಫಲಿತಾಂಶ ಹೆಚ್ಚಳಕ್ಕಾಗಿ ಉತ್ತಮ ಕ್ರಿಯಾ ಯೋಜನೆಗಳನ್ನು ರೂಪಿಸಿದ್ದರು. ಜೊತೆಗೆ ಶಿಕ್ಷಕರು ಹೆಚ್ಚುವರಿ ತರಗತಿಗಳನ್ನು ನಡೆಸಿ, ತಾಯಂದಿರ ಸಭೆಗಳನ್ನು ಆಯೋಜಿಸಿ, ಅನುಷ್ಠಾನ ಕಾರ್ಯಯೋಜನೆಗಳನ್ನು ಆಗಾಗ ಅವಲೋಕಿಸಿದ್ದರು. ಈ ಮೂಲಕ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ಕಳೆಯುವುದರ ಜೊತೆಗೆ ಕಲಿಕಾ ಪ್ರಕ್ರಿಯೆ ಉತ್ತಮವಾಗಿರುವಂತೆ ಎಚ್ಚರಿಕೆ ವಹಿಸಲಾಗಿತ್ತು.
‘ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ’ ಎಂಬುದಕ್ಕೆ ಹಾಸನಕ್ಕೆ ದೊರೆತಿರುವ ಫಲಿತಾಂಶ ನಿದರ್ಶನ. ಜೊತೆಗೆ ಆಡಳಿತಾಧಿಕಾರಿಯೊಬ್ಬರು ಮನಸ್ಸು ಮಾಡಿದರೆ ಏನೆಲ್ಲಾ ಬದಲಾವಣೆ ತರಬಹುದು ಎಂಬುದಕ್ಕೂಉದಾಹರಣೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.