ADVERTISEMENT

ವಾಚಕರ ವಾಣಿ | ಅಂಗವಿಕಲರಿಗೂ ಸೌಲಭ್ಯ ವಿಸ್ತರಣೆಯಾಗಲಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2020, 19:30 IST
Last Updated 13 ಆಗಸ್ಟ್ 2020, 19:30 IST

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಮ್ಮ ಸಮುದಾಯದ ವಿದ್ಯಾರ್ಥಿಗಳ ಪೈಕಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ₹ 1 ಲಕ್ಷ ಪ್ರೋತ್ಸಾಹ ಧನ ನೀಡುತ್ತಿರುವುದು ಹಿಂದುಳಿದ ಸಮುದಾಯದ ಶೈಕ್ಷಣಿಕ ಸಬಲೀಕರಣಕ್ಕೆ ಅವಶ್ಯಕ ಹಾಗೂ ಶ್ಲಾಘನೀಯ.

ಅದೇ ರೀತಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಅತ್ಯಂತ ದುರ್ಬಲವಾದ ಮತ್ತೊಂದು ವರ್ಗವೆಂದರೆ ಅಂಗವಿಕಲ ವರ್ಗ ಎಂಬುದನ್ನು ಸರ್ಕಾರ ಮರೆಯಬಾರದು.‌ ಶಿಕ್ಷಣದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದ ಅಭ್ಯರ್ಥಿಗಳಿಗೆ ನೀಡುವ ಸೌಲಭ್ಯಗಳಿಗೆ ಕಮ್ಮಿ ಇಲ್ಲದಂತೆ ಅಂಗವಿಕಲರಿಗೂ ಎಲ್ಲಾ ಸೌಲಭ್ಯಗಳನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಇತ್ತೀಚೆಗಷ್ಟೇ ಆದೇಶ ನೀಡಿದೆ. ಅದರಂತೆ, ಈಗ ಸರ್ಕಾರ ಆಯಾ ಜಿಲ್ಲೆಯಲ್ಲಿ ಅಂಗವಿಕಲ ವಿದ್ಯಾರ್ಥಿಗಳ ಪೈಕಿ ಪ್ರಥಮ ಸ್ಥಾನ ಪಡೆದವರಿಗೂ ಪ್ರೋತ್ಸಾಹಧನ ನೀಡಬೇಕು. ಈ ಮೂಲಕ ಅಂಗವಿಕಲ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಬರಲು ಹಾಗೂ ಅಂಗವಿಕಲ ಸಮೂಹದ ಸಬಲೀಕರಣಕ್ಕೆ ಉತ್ತೇಜನ ನೀಡಬೇಕು.

-ಚಂದ್ರಶೇಖರ ಪುಟ್ಟಪ್ಪ, ಬೆಂಗಳೂರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.