ಕೇಂದ್ರ ಮೋಟಾರು ವಾಹನಗಳ ನಿಯಮಾನುಸಾರ, ವಾಹನಗಳ ನೋಂದಣಿ ಫಲಕಗಳ ಮೇಲೆ ಸ್ಥಳೀಯ ಸಂಸ್ಥೆಗಳ ಹೆಸರು, ಚಿಹ್ನೆ, ಲಾಂಛನಗಳನ್ನು ಅಳವಡಿಸುವುದು ಕಾನೂನುಬಾಹಿರ. ಇಂತಹ ಫಲಕಗಳು ಕಂಡುಬಂದಲ್ಲಿ ಸಾರ್ವಜನಿಕರು ಅದರ ಭಾವಚಿತ್ರವನ್ನು ವಾಟ್ಸ್‌ಆ್ಯಪ್ ಮೂಲಕ ಕಳುಹಿಸಿಕೊಟ್ಟರೆ ಕ್ರಮ ಜರುಗಿಸುವುದಾಗಿ ಸಾರಿಗೆ ಇಲಾಖೆಯು ಪತ್ರಿಕಾ ಜಾಹೀರಾತು ನೀಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿಂದೆ ಹಲವು ಬಾರಿ ಕ್ರಮ ಕೈಗೊಂಡಿದ್ದಾರೆ. ಆದರೆ, ಕೆಲವು ದಿನಗಳ ಬಳಿಕ ಯಥಾಸ್ಥಿತಿ ಮುಂದುವರಿಯುತ್ತದೆ. ಅನಧಿಕೃತ ನೋಂದಣಿ ಫಲಕಗಳು ರಾರಾಜಿಸುತ್ತವೆ.
ನೋಂದಣಿ ಫಲಕ, ಸ್ಥಳ ಸಮೇತ ಭಾವಚಿತ್ರವನ್ನು ತೆಗೆದು ಕಳುಹಿಸುವ ಸಾರ್ವಜನಿಕರಿಗೆ ಪ್ರೋತ್ಸಾಹಧನ ನೀಡಿದರೆ, ದಿನ ಬೆಳಗಾಗುವುದರೊಳಗೆ ಈ ಅಭಿಯಾನ ಯಶಸ್ವಿಯಾಗುವುದರಲ್ಲಿ ಸಂದೇಹವಿಲ್ಲ.
-ರಘುನಾಥರಾವ್ ತಾಪ್ಸೆ, ದಾವಣಗೆರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.