ADVERTISEMENT

IND vs PAK: ನ್ಯೂಯಾರ್ಕ್ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಿದ 34 ಸಾವಿರ ಮಂದಿ

ಏಜೆನ್ಸೀಸ್
Published 11 ಜೂನ್ 2024, 6:00 IST
Last Updated 11 ಜೂನ್ 2024, 6:00 IST
<div class="paragraphs"><p>ಭಾರತ ಹಾಗೂ ಪಾಕಿಸ್ತಾನ ಅಭಿಮಾನಿಗಳು</p></div>

ಭಾರತ ಹಾಗೂ ಪಾಕಿಸ್ತಾನ ಅಭಿಮಾನಿಗಳು

   

ಪಿಟಿಐ ಚಿತ್ರ

ನ್ಯೂಯಾರ್ಕ್: ಕ್ರಿಕೆಟ್‌ ಜಗತ್ತಿನ ಬದ್ಧ ಎದುರಾಳಿಗಳೆಂದು ಕರೆಸಿಕೊಳ್ಳುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ಟಿ20 ವಿಶ್ವಕಪ್‌ ಟೂರ್ನಿಯ ಪಂದ್ಯದಲ್ಲಿ ಭಾನುವಾರ ಮುಖಾಮುಖಿಯಾಗಿದ್ದವು. ನ್ಯೂಯಾರ್ಕ್‌ನ ನಾಸೌ ಕೌಂಟಿ ಮೈದಾನದಲ್ಲಿ ನಡೆದ ಈ ಪಂದ್ಯವನ್ನು ಬರೋಬ್ಬರಿ 34 ಸಾವಿರ ಅಭಿಮಾನಿಗಳು ಕ್ರೀಡಾಂಗಣದಲ್ಲಿಯೇ ವೀಕ್ಷಿಸಿದ್ದಾರೆ ಎಂದು ವರದಿಯಾಗಿದೆ.

ADVERTISEMENT

ಇದೇ ಮೊದಲ ಬಾರಿಗೆ ಅಮೆರಿಕದಲ್ಲಿ ಆಯೋಜನೆಗೊಂಡಿರುವ ವಿಶ್ವಕಪ್‌ ಕ್ರಿಕೆಟ್‌ ಪಂದ್ಯವನ್ನು ಇಷ್ಟು ಸಂಖ್ಯೆಯಲ್ಲಿ ವೀಕ್ಷಿಸಿರುವುದು, ಕ್ರಿಕೆಟ್‌ ಬೆಳವಣಿಗೆ ದೃಷ್ಟಿಯಿಂದ ಆಶಾದಾಯಕ ಸಂಗತಿಯಾಗಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 19 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 119 ರನ್‌ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಪಾಕಿಸ್ತಾನ ನಿಗಿದಿತ ಓವರ್‌ಗಳು ಪೂರ್ಣಗೊಂಡರೂ, 7 ವಿಕೆಟ್‌ಗಳನ್ನು ಕಳೆದುಕೊಂಡು 113 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಈ ವಿಶ್ವಕಪ್‌ ಟೂರ್ನಿಯ ಹೈವೋಲ್ಟೇಜ್ ಪಂದ್ಯವೆಂದೇ ಬಿಂಬಿತವಾಗಿದ್ದ ಈ ಹಣಾಯಣಿಯಲ್ಲಿ ಉಭಯ ತಂಡಗಳ ಬ್ಯಾಟರ್‌ಗಳು ರನ್‌ ಗಳಿಸಲು ಪರದಾಡಿದರು. ಆದಾಗ್ಯೂ, ಈ ಸೆಣಸಾಟ ತೀವ್ರ ಹಣಾಹಣಿಗೆ ಸಾಕ್ಷಿಯಾಯಿತು.

ಈ ಗೆಲುವಿನೊಂದಿಗೆ ಭಾರತ ತಂಡವು ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಡಿದ 8 ಪಂದ್ಯಗಳಲ್ಲಿ 7ನೇ ಜಯ ಸಾಧಿಸಿ, ಪ್ರಾಬಲ್ಯ ಮುಂದುವರಿಸಿತು. ಒಟ್ಟಾರೆ ಚುಟಕು ಕ್ರಿಕೆಟ್‌ ಮಾದರಿಯಲ್ಲಿ ಉಭಯ ತಂಡಗಳು 13 ಬಾರಿ ಮುಖಾಮುಖಿಯಾಗಿದ್ದು ಭಾರತ 10ನೇ ಗೆಲುವು ಸಾಧಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.