ಇಂದೋರ್: ಬಾರ್ಡರ್–ಗಾವಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಟಾಸ್ ಗೆದ್ದಿರುವ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.
ಭಾರತ ತಂಡ ಆರಂಭಿಕ ಆಘಾತ ಅನುಭವಿಸಿದ್ದು ಕೇವಲ 8 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡಿದೆ. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ, ಶುಭುಮನ್ ಗಿಲ್ ಹಾಗೂ ಚೇತೇಶ್ವರ್ ಪೂಜಾರ ಔಟ್ ಆಗಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳುವತ್ತ ಚಿತ್ತ ನೆಟ್ಟಿರುವ ಭಾರತ ಕ್ರಿಕೆಟ್ ತಂಡ ಅಪಾರ ಆತ್ಮವಿಶ್ವಾಸದಲ್ಲಿ ಕಣಕ್ಕಿಳಿದಿದೆ. ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಮೊದಲ ಎರಡೂ ಪಂದ್ಯಗಳನ್ನು ಭಾರತ ತಂಡ ಗೆದ್ದಿದೆ.
ತಂಡಗಳು: ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್. ಭರತ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ರವೀಂದ್ರ ಜಡೇಜ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್,
ಆಸ್ಟ್ರೇಲಿಯಾ: ಸ್ಟೀವ್ ಸ್ಮಿತ್ (ನಾಯಕ), ಅಲೆಕ್ಸ್ ಕ್ಯಾರಿ, ಕ್ಯಾಮರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮ್ಯಾಟ್ ಕುನೇಮನ್, ಮಾರ್ನಸ್ ಲಾಬುಷೇನ್, ನೇಥನ್ ಲಯನ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.