ಕರಾಚಿ: ಪಾಕಿಸ್ತಾನ ತಂಡದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಶುಕ್ರವಾರ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಮುಂದುವರಿಯುವುದಾಗಿ ಅವರು ತಿಳಿಸಿದರು.
27 ವರ್ಷದ ಅಮೀರ್ 2010ರಲ್ಲಿ ಇಂಗ್ಲೆಂಡ್ನಲ್ಲಿ ನಡೆದ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ಏಕದಿನ ಹಾಗೂ ಟ್ವೆಂಟಿ–20 ಪಂದ್ಯಗಳತ್ತ ಗಮಹರಿಸಲು ಟೆಸ್ಟ್ ಕ್ರಿಕೆಟ್ ತೊರೆಯಬ ಯಸಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೇಳಿಕೆ ತಿಳಿಸಿದೆ.
ಅಮೀರ್ 36 ಟೆಸ್ಟ್ಗಳಿಂದ 119 ವಿಕೆಟ್ ಗಳಿಸಿದ್ದಾರೆ. 59 ಏಕದಿನ ಹಾಗೂ 49 ಟ್ವೆಂಟಿ–20 ಪಂದ್ಯಗಳನ್ನೂ ಅವರು ಆಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.