ADVERTISEMENT

ಸಚಿನ್ ಬೆನ್ನಲ್ಲೇ ಯೂಸುಫ್ ಪಠಾಣ್‌ಗೆ ಕೋವಿಡ್ ಪಾಸಿಟಿವ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಮಾರ್ಚ್ 2021, 16:47 IST
Last Updated 27 ಮಾರ್ಚ್ 2021, 16:47 IST
ಭಾರತದ ಮಾಜಿ ಆಟಗಾರ ಯೂಸುಫ್ ಪಠಾಣ್
ಭಾರತದ ಮಾಜಿ ಆಟಗಾರ ಯೂಸುಫ್ ಪಠಾಣ್   

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯೂಸುಫ್ ಪಠಾಣ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರೊಂದಿಗೆ ಮಾಜಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಬೆನ್ನಲ್ಲೇ ಯೂಸುಫ್ ಪಠಾಣ್ ಅವರಲ್ಲೂ ಕೋವಿಡ್ ಸೋಂಕು ಪತ್ತೆಯಾಗಿದೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವರ್ಲ್ಡ್ ರೋಡ್ ಸೇಫ್ಟಿ ಕ್ರಿಕೆಟ್ ಟೂರ್ನಿಯಲ್ಲಿ ಇಂಡಿಯಾ ಲೆಜೆಂಡ್ಸ್ ತಂಡವನ್ನು ಇವರಿಬ್ಬರು ಜೊತೆಯಾಗಿ ಪ್ರತಿನಿಧಿಸಿದ್ದರು.

ADVERTISEMENT

ಹಾಗಾಗಿ ಟೂರ್ನಿಯಲ್ಲಿ ಭಾಗವಹಿಸಿದ ಮತ್ತಷ್ಟು ಆಟಗಾರರಿಗೆ ಕೊರೊನಾ ಸೋಂಕು ತಗುಲಿರಬಹುದೇ ಎಂಬುದು ಆತಂಕಕ್ಕೆ ಕಾರಣವಾಗಿದೆ.

38 ವರ್ಷದ ಯೂಸುಫ್ ಈ ಕುರಿತು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, 'ಸೌಮ್ಯ ಸ್ವರೂಪದ ರೋಗಲಕ್ಷಣಗಳೊಂದಿಗೆ ನನಗೆ ಇಂದು (ಶನಿವಾರ) ಕೋವಿಡ್-19 ಸೋಂಕು ತಗುಲಿರುವುದು ದೃಢಗೊಂಡಿದೆ. ನಾನೀಗ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮಹಾಗೂ ಔಷಧಿಗಳನ್ನು ತೆಗೆದುಕೊಂಡಿದ್ದೇನೆ. ಇದೇ ವೇಳೆಯಲ್ಲಿ ಇತ್ತೀಚಿಗೆ ನನ್ನ ಜೊತೆ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗನೇ ಕೋವಿಡ್ಪರೀಕ್ಷೆಗೊಳಗಾಗಲು ವಿನಂತಿಸುವುದಾಗಿ' ತಿಳಿಸಿದ್ದಾರೆ.

ರಾಯ್‌ಪುರದಲ್ಲಿ ಕಳೆದ ಭಾನುವಾರ ಅಂತ್ಯಗೊಂಡ ಚೊಚ್ಚಲ ವರ್ಲ್ಡ್ ರೋಡ್ ಸೇಫ್ಟಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಲೆಜೆಂಡ್ಸ್ ತಂಡವನ್ನು ಮಣಿಸಿದ್ದ ಸಚಿನ್ ತೆಂಡೂಲ್ಕರ್ ನೇತೃತ್ವದ ಇಂಡಿಯಾ ಲೆಜೆಂಡ್ಸ್ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.