ದುಬೈ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಬುಧವಾರ ಏಷ್ಯಾಕಪ್ 2022 ಟೂರ್ನಿಯ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಒಂದು ಓವರ್ ಬೌಲ್ ಮಾಡಿ ಗಮನ ಸೆಳೆದರು.
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದ 17ನೇ ಓವರ್‌ನಲ್ಲಿ ಬೌಲಿಂಗ್ ಮಾಡಿದ್ದ ಅವರು 6 ರನ್ ನೀಡಿದರು. 2016ರ ನಂತರ ಇದೇ ಮೊದಲ ಬಾರಿಗೆ ಕೊಹ್ಲಿ ಟಿ20 ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ 25.2 ಓವರ್‌ಗಳನ್ನು ಬೌಲ್ ಮಾಡಿರುವ ವಿರಾಟ್ ಕೊಹ್ಲಿ 204 ರನ್ ನೀಡಿ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ.
ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 40 ರನ್ ಅಂತರದ ಗೆಲುವು ದಾಖಲಿಸಿತ್ತು. ಇದರೊಂದಿಗೆ 'ಸೂಪರ್ –4' ಹಂತಕ್ಕೆ ಪ್ರವೇಶಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ, ಸೂರ್ಯಕುಮಾರ್ ಯಾದವ್ ಹಾಗೂ ಕೊಹ್ಲಿ ಅರ್ಧಶತಕಗಳ ನೆರವಿನಿಂದ ಎರಡು ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತ್ತು. ಬಳಿಕ ಗುರಿ ಬೆನ್ನಟ್ಟಿದ ಹಾಂಗ್ ಕಾಂಗ್ ಐದು ವಿಕೆಟ್ ನಷ್ಟಕ್ಕೆ 152 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ಕೊಹ್ಲಿ ಹಾಗೂ ಸೂರ್ಯಕುಮಾರ್ 42 ಎಸೆತಗಳಲ್ಲಿ 98 ರನ್‌ಗಳ ಜೊತೆಯಾಟ ಕಟ್ಟಿದರು.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.