ADVERTISEMENT

Asia Cup: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆಯ ಭೀತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಸೆಪ್ಟೆಂಬರ್ 2023, 12:59 IST
Last Updated 9 ಸೆಪ್ಟೆಂಬರ್ 2023, 12:59 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕೊಲಂಬೊ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಸೂಪರ್ 4ರ ಪಂದ್ಯ ಭಾನುವಾರ ಕೊಲಂಬೊದಲ್ಲಿ ನಡೆಯಲಿದೆ.

ಆದರೆ ಪಂದ್ಯಕ್ಕೆ ಮಳೆಯ ಭೀತಿ ಕಾಡುತ್ತಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಒಂದು ವೇಳೆ ಮಳೆ ಅಡ್ಡಿಯಾದರೆ ಮೀಸಲು ದಿನದಂದು (ಸೋಮವಾರ) ಪಂದ್ಯ ಮುಂದುವರಿಯಲಿದೆ.

ADVERTISEMENT

ಉಭಯ ತಂಡಗಳ ನಡುವೆ ಪಲೀಕೆಲೆಯಲ್ಲಿ ನಡೆದ ಮೊದಲ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿತ್ತು. ವಿಶ್ವಕಪ್‌ಗೂ ಮುನ್ನ ಪೂರ್ವ ಸಿದ್ಧತೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಈ ಟೂರ್ನಿ ಮಹತ್ವದೆನಿಸಿದೆ.

ಮಳೆ ಸಾಧ್ಯತೆ...

ಹವಾಮಾನ ಇಲಾಖೆಯ ವರದಿ ಪ್ರಕಾರ ಕೊಲಂಬೊದಲ್ಲಿ ಮಳೆ ಸುರಿಯುವ ಸಾಧ್ಯತೆ ಶೇ 90ರಷ್ಟು ಇದೆ ಎನ್ನಲಾಗಿದೆ.

ರಾಹುಲ್ ಫಿಟ್, ಸಂಜು ತವರಿಗೆ...

ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್. ರಾಹುಲ್ ಸಂಪೂರ್ಣ ಫಿಟ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಜು ಸ್ಯಾಮ್ಸನ್ ಅವರು ಸ್ವದೇಶಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ.

ಆದರೂ ಇಶಾನ್ ಕಿಶನ್ ಉತ್ತಮ ಪ್ರದರ್ಶನ ನೀಡಿರುವ ಹಿನ್ನೆಲೆಯಲ್ಲಿ ರಾಹುಲ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.