ADVERTISEMENT

ನಂ.4 ಕ್ರಮಾಂಕಕ್ಕೆ ವಿರಾಟ್ ಅತ್ಯುತ್ತಮ ಆಯ್ಕೆ: ಎಬಿ ಡಿ ವಿಲಿಯರ್ಸ್

ಪಿಟಿಐ
Published 26 ಆಗಸ್ಟ್ 2023, 10:50 IST
Last Updated 26 ಆಗಸ್ಟ್ 2023, 10:50 IST
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ   (ಪಿಟಿಐ ಚಿತ್ರ)

ನವದೆಹಲಿ: ಮುಂಬರುವ ಏಷ್ಯಾ ಕಪ್ ಹಾಗೂ ಏಕದಿನ ವಿಶ್ವಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಯಾವ ಆಟಗಾರ ಬ್ಯಾಟಿಂಗ್ ಮಾಡಬೇಕು ಎಂಬುದರ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ.

ಈ ಕುರಿತು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿ ವಿಲಿಯರ್ಸ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ನಾಲ್ಕನೇ ಕ್ರಮಾಂಕಕ್ಕೆ ತಮ್ಮ ಆಪ್ತ ಸ್ನೇಹಿತ ವಿರಾಟ್ ಕೊಹ್ಲಿ ಹೆಸರನ್ನು ಸೂಚಿಸಿದ್ದಾರೆ.

ಟೀಮ್ ಇಂಡಿಯಾದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಯಾರು ಬ್ಯಾಟಿಂಗ್ ಮಾಡಬೇಕು ಎಂಬುದರ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿಗೆ ಅವಕಾಶ ನೀಡಬೇಕು ಎಂಬುದರ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಅದನ್ನು ನಾನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.

ADVERTISEMENT

ನಂ.4 ಕ್ರಮಾಂಕಕ್ಕೆ ವಿರಾಟ್ ಅತ್ಯುತ್ತಮ ಆಯ್ಕೆ ಎಂದು ನಾನು ಭಾವಿಸುತ್ತೇನೆ. ಮಧ್ಯಮ ಕ್ರಮಾಂಕದಲ್ಲಿ ಯಾವುದೇ ರೀತಿಯ ಜವಾಬ್ದಾರಿಯನ್ನು ನಿಭಾಯಿಸಬಲ್ಲರು. ಆದರೆ ನಾಲ್ಕನೇ ಕ್ರಮಾಂಕದಲ್ಲಿ ಆಡಲು ಅವರು ಬಯಸುತ್ತಾರೆಯೇ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಆಡುವುದನ್ನು ವಿರಾಟ್ ಇಷ್ಟಪಡುತ್ತಾರೆ. ಅಲ್ಲಿ ಸಾವಿರಾರು ರನ್ ಗಳಿಸಿದ್ದಾರೆ. ಆದರೆ ತಂಡವು ನಿರ್ದಿಷ್ಟ ಜವಾಬ್ದಾರಿ ಬಯಸಿದ್ದರೆ ಅದನ್ನು ನಿರ್ವಹಿಸಬೇಕಾಗುತ್ತದೆ ಎಂದು ವಿಲಿಯರ್ಸ್ ಹೇಳಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ಕೊಹ್ಲಿ, 39 ಇನಿಂಗ್ಸ್‌ಗಳಲ್ಲಿ 55.21ರ ಸರಾಸರಿಯಲ್ಲಿ (90.66 ಸ್ಟ್ರೈಕ್‌ರೇಟ್) 1,767 ರನ್ ಗಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.