ADVERTISEMENT

ರಾಹುಲ್‌–ಆಥಿಯಾ: ಮದುವೆ ಯಾವಾಗ ಬ್ರೊ ಎಂದ ನೆಟ್ಟಿಗರು

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2022, 11:19 IST
Last Updated 15 ಮಾರ್ಚ್ 2022, 11:19 IST
   

ಮುಂಬೈ: ಭಾರತ ಕ್ರಿಕೆಟ್ ತಂಡದ ಬಲಗೈ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಮತ್ತು ಬಾಲಿವುಡ್ ನಟಿ ಹಾಗೂ ಸುನಿಲ್ ಶೆಟ್ಟಿ ಅವರ ಪುತ್ರಿ ಆಥಿಯಾ ಶೆಟ್ಟಿ ನಡುವಣ ಡೇಟಿಂಗ್ ವಿಚಾರ ಎಲ್ಲರಿಗೂ ಗೊತ್ತಿರುವ ವಿಚಾರ.

ಈ ಜೋಡಿ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ರಾಹುಲ್ ಅವರನ್ನು ಕರೆದುಕೊಂಡು ಹೋಗಲು ಆಥಿಯಾ ಬಂದಿದ್ದು ಸುದ್ದಿಯಾಗಿದೆ.

ರಾಹುಲ್ ಅವರನ್ನು ಬರಮಾಡಿಕೊಳ್ಳುತ್ತಿರುವ ಫೋಟೊವನ್ನು ನೆಟ್ಟಿಗರೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಫೋಟೊ ವೈರಲ್‌ ಆಗಿದ್ದು ಅಭಿಮಾನಿಗಳು ತರಹೇವಾರಿ ಕಾಮೆಂಟ್‌ಗಳನ್ನು ಹಾಕುತ್ತಿದ್ದಾರೆ.

ADVERTISEMENT

ಅಭಿಮಾನಿಯೊಬ್ಬರು ಮದುವೆ ಯಾವಾಗ ಬ್ರೊ ಎಂದು ಕಾಮೆಂಟ್‌ ಮಾಡಿದ್ದಾರೆ. ಈ ಜೋಡಿ ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.