ADVERTISEMENT

ಟಿ–20 ಕ್ರಿಕೆಟ್‌: ಭಾರತದ ಗೆಲುವಿಗೆ 174 ರನ್‌ ಗುರಿ ನೀಡಿದ ಆಸ್ಟ್ರೇಲಿಯಾ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2018, 11:01 IST
Last Updated 21 ನವೆಂಬರ್ 2018, 11:01 IST
   

ಬ್ರಿಸ್ಟೇನ್: ಇಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಟಿ–20 ಕ್ರಿಕೆಟ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡ ಸವಾಲಿನ ಮೊತ್ತ ಪೇರಿಸಿದೆ.

ಆಸ್ಟ್ರೇಲಿಯಾ 17 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 158 ರನ್‌ ಗಳಿಸಿತ್ತು. ಈ ವೇಳೆ ಮಳೆ ಸುರಿದ ಪರಿಣಾಮ ಪಂದ್ಯವನ್ನು 17 ಓವರ್‌ಗಳಿಗೆ ಮೊಟಕುಗೊಳಿಸಿ, ಭಾರತಕ್ಕೆ 174 ರನ್‌ಗಳ ಗುರಿ ನಿಗದಿ ಪಡಿಸಲಾಯಿತು.

ಭಾರತದ ಪರ ಕುಲದೀಪ್‌ ಯಾದವ್‌ 2, ಖಲೀಲ್‌ ಅಹಮ್ಮದ್‌ 1, ಜಸ್‌ಪ್ರೀತ್‌ ಬೂಮ್ರಾ 1 ವಿಕೆಟ್‌ ‍ಪಡೆದರು.

ADVERTISEMENT

ಸದ್ಯ ಬ್ಯಾಟಿಂಗ್‌ ಆರಂಭಿಸಿರುವ ಭಾರತ 8 ಓವರ್‌ಗಳಲ್ಲಿ ಒಂದು ವಿಕೆಟ್‌ ಕಳೆದುಕೊಂಡು 81 ರನ್‌ ಗಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.