ಮೆಲ್ಬರ್ನ್: ಇಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2–1 ರಲ್ಲಿ ಗೆದ್ದುಕೊಂಡಿತು.
ಆಸೀಸ್ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಯಜುವೇಂದ್ರ ಚಾಹಲ್ ಅವರ ಸ್ಪಿನ್ ದಾಳಿಗೆ ತತ್ತರಿಸಿದ ಫಿಂಚ್ ಪಡೆ 48.4 ಓವರ್‌ಗಳಲ್ಲಿ 230 ರನ್ ಗಳಿಸಿ ಆಲೌಟ್ ಆಯಿತು.
ಈ ಗುರಿ ಬೆನ್ನತ್ತಿದ ಕೊಹ್ಲಿ ಪಡೆ ನಾಲ್ಕುಎಸೆತಗಳು ಬಾಕಿ ಇರುವಾಗಲೇ ಗೆಲುವಿನ ನಗೆ ಬೀರಿತು.
ಆರಂಭಿಕ ಆಘಾತ: ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡು ಸಂಕಷ್ಟ ಎದುರಿಸಿತು. ಬಳಿಕ ಕ್ರೀಸ್‌ಗೆ ಬಂದ ಧೋನಿಹಾಗೂ ಕೇದಾರ್ ಜಾಧವ್ ಉತ್ತಮ ಜೊತೆಯಾಟವಾಡಿದರು.
ಧೋನಿ 114 ಎಸೆತಗಳಲ್ಲಿ 6 ಬೌಂಡರಿ ಸಿಡಿಸಿ 87 ರನ್ ಗಳಿಸಿದರು. ಇತ್ತ ಜಾಧವ್ 57 ಎಸೆತಗಳಲ್ಲಿ 7 ಬೌಂಡರಿ ಸಹಿತ 61 ರನ್ ಗಳಿಸಿದರು.
ಆರು ವಿಕೆಟ್ ಕಬಳಿಸಿದ್ದ ಚಾಹಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.