ADVERTISEMENT

ವಿರಾಟ್ ಕೊಹ್ಲಿಯ ಮಗದೊಂದು ದಾಖಲೆ ಸರಿಗಟ್ಟಿದ ಬಾಬರ್ ಆಜಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ನವೆಂಬರ್ 2021, 13:01 IST
Last Updated 8 ನವೆಂಬರ್ 2021, 13:01 IST
ಬಾಬರ್ ಆಜಂ
ಬಾಬರ್ ಆಜಂ   

ದುಬೈ: 'ರನ್ ಮೆಷಿನ್' ಖ್ಯಾತಿಯ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಗದೊಂದು ದಾಖಲೆಯನ್ನು ಪಾಕಿಸ್ತಾನದ ನಾಯಕ ಬಾಬರ್ ಆಜಂ ಸರಿಗಟ್ಟಿದ್ದಾರೆ.

ಟ್ವೆಂಟಿ-20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಬ್ಯಾಟರ್‌ ಸಾಲಿನಲ್ಲಿ ವಿರಾಟ್ ಕೊಹ್ಲಿ ಹಾಗೂ ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ದಾಖಲೆಯನ್ನು ಬಾಬರ್ ಸರಿಗಟ್ಟಿದ್ದಾರೆ.

2021ನೇ ಸಾಲಿನ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಆಡಿರುವ ಐದು ಪಂದ್ಯಗಳಲ್ಲಿ ಪೈಕಿ ಬಾಬರ್ ನಾಲ್ಕು ಅರ್ಧಶತಕಗಳನ್ನು ಸಿಡಿಸಿದ್ದಾರೆ.

2007ರ ಚೊಚ್ಚಲ ಟಿ20 ವಿಶ್ವಕಪ್‌ನಲ್ಲಿ ಹೇಡನ್ ಮತ್ತು 2014ರಲ್ಲಿ ವಿರಾಟ್ ಕೊಹ್ಲಿ ತಲಾ ನಾಲ್ಕು ಅರ್ಧಶತಕಗಳನ್ನು ಗಳಿಸಿದ್ದರು.

ಬಾಬರ್ ಆಜಂ 66ರ ಸರಾಸರಿಯಲ್ಲಿ ಒಟ್ಟು 264 ರನ್ ಕಲೆ ಹಾಕಿದ್ದಾರೆ. ಈ ಮೂಲಕ 2021ರ ವಿಶ್ವಕಪ್ ಟೂರ್ನಿಯಲ್ಲಿಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ ಸಾಲಿನಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ.

ಗೇಲ್ ದಾಖಲೆ ಮುರಿದ ರಿಜ್ವಾನ್...
ಏತನ್ಮಧ್ಯೆ ಟ್ವೆಂಟಿ-20 ಕ್ರಿಕೆಟ್‌ನ ಕ್ಯಾಲೆಂಡರ್ ವರ್ಷವೊಂದರಲ್ಲಿ ಗರಿಷ್ಠ ರನ್ ದಾಖಲಿಸಿದ ಬ್ಯಾಟರ್‌‌ಗಳ ಪೈಕಿ ವೆಸ್ಟ್‌ಇಂಡೀಸ್‌ನ ಕ್ರಿಸ್ ಗೇಲ್ ದಾಖಲೆಯನ್ನು ಪಾಕಿಸ್ತಾನದ ಬಲಗೈ ಆರಂಭಿಕ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಮುರಿದಿದ್ದಾರೆ.

2015ನೇ ಸಾಲಿನಲ್ಲಿ ಗೇಲ್ 1665 ರನ್ ಕಲೆ ಹಾಕಿದ್ದರು. ಈ ದಾಖಲೆಯನ್ನೀಗ ರಿಜ್ವಾನ್ ತಮ್ಮದಾಗಿಸಿದ್ದಾರೆ. ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 2016ರಲ್ಲಿ 1614 ರನ್ ಗಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.