ಮೀರಪುರ್: ಭಾರತ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ರೋಹಿತ್ ಶರ್ಮಾ ಗಾಯಗೊಂಡಿದ್ದು ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಆದ್ದರಿಂದ ಕನ್ನಡಿಗ ಕೆ.ಎಲ್. ರಾಹುಲ್ ಅವರೇ ಈ ಪಂದ್ಯಕ್ಕೂ ನಾಯಕತ್ವ ವಹಿಸಿದ್ದಾರೆ.
ಇದೀಗ ಬಾಂಗ್ಲಾ ವಿರುದ್ಧದ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ, ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಅಂಕಪಟ್ಟಿಯ ಅಗ್ರ ಎರಡರಲ್ಲಿ ಸ್ಥಾನ ಗಟ್ಟಿಗೊಳಿಸಿಕೊಳ್ಳುವ ಛಲದಲ್ಲಿದೆ.
ಆತಿಥೇಯ ತಂಡವು ಮೊದಲ ಪಂದ್ಯದಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಈ ಪಂದ್ಯದಲ್ಲಿ ಜಯಿಸಿ ಸರಣಿ ಸಮ ಮಾಡಿಕೊಳ್ಳುವ ಛಲದಲ್ಲಿದೆ.
ಎರಡು ಪಂದ್ಯಗಳ ಟೆಸ್ಟ್ ಸರಣಿ ಇದಾಗಿದೆ. ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು.
ಸದ್ಯ ಬ್ಯಾಟಿಂಗ್ ಆರಂಭಿಸಿರುವ ಬಾಂಗ್ಲಾ 8 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 20 ರನ್ ಗಳಿಸಿದೆ (ನಜ್ಮುಲ್ ಹಸನ್ ಶಾಂತೊ 9, ಝಾಕೀರ್ ಹಸನ್ 11 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ತಂಡಗಳು ಇಂತಿವೆ: ಭಾರತ: ಕೆ.ಎಲ್. ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಶ್ರೇಯಸ್ ಐಯ್ಯರ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಜಯದೇವ್ ಉನದ್ಕತ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್.
ಬಾಂಗ್ಲಾದೇಶ: ನಜ್ಮುಲ್ ಹಸನ್ ಶಾಂತೊ, ಝಾಕೀರ್ ಹಸನ್, ಮೊಮಿನುಲ್ ಹಕ್, ಲಿಟನ್ ದಾಸ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಂ, ನೂರುಲ್ ಹಸನ್, ಮೆಹದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್ , ತಸ್ಕಿನ್ ಅಹ್ಮದ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.