ADVERTISEMENT

ಬಿಸಿಸಿಐ ಗುತ್ತಿಗೆ ಪ್ರಕಟ: ಅಗ್ರಸ್ಥಾನ ಉಳಿಸಿಕೊಂಡ ಕೊಹ್ಲಿ, ರೋಹಿತ್, ಬೂಮ್ರಾ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 6:10 IST
Last Updated 16 ಏಪ್ರಿಲ್ 2021, 6:10 IST
ಜಸ್‌ಪ್ರೀತ್ ಬೂಮ್ರಾ –ಹಾರ್ದಿಕ್ ಪಾಂಡ್ಯ
ಜಸ್‌ಪ್ರೀತ್ ಬೂಮ್ರಾ –ಹಾರ್ದಿಕ್ ಪಾಂಡ್ಯ   

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಮಧ್ಯಮವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕೇಂದ್ರಿಯ ಗುತ್ತಿಗೆಯ ಎ ಪ್ಲಸ್ ಗ್ರೇಡ್‌ ಉಳಿಸಿಕೊಂಡಿದ್ದಾರೆ.

ಈ ಮೂವರು ಆಟಗಾರರೂ ತಲಾ ₹ 7 ಕೋಟಿ ಮೌಲ್ಯ ಪಡೆಯಲಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಬಿ ಗುಂಪಿನಿಂದ ಎ ಗ್ರೇಡ್‌ಗೆ ಬಡ್ತಿ ಪಡೆದಿದ್ದಾರೆ. ಈ ವರ್ಷ ಅವರು ಗಾಯದ ಸಮಸ್ಯೆಯಿಂದ ಹೆಚ್ಚು ಪಂದ್ಯಗಳಲ್ಲಿ ಆಡಿರಲಿಲ್ಲ. ಆಡಿದ ಕೆಲವು ಪಂದ್ಯಗಳಲ್ಲಿ ಬೌಲಿಂಗ್ ಮಾಡಿರಲಿಲ್ಲ. ಬ್ಯಾಟಿಂಗ್ ಮಾಡಿದ್ದರು.

ಗುರುವಾರ ಪ್ರಕಟಿಸಿರುವ ಗುತ್ತಿಗೆ ಪಟ್ಟಿಯಲ್ಲಿ ಒಟ್ಟು 28 ಆಟಗಾರರು ಸ್ಥಾನ ಪಡೆದಿದ್ದಾರೆ. ಅದರಲ್ಲಿ ಯುವ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಮತ್ತು ಮಧ್ಯಮವೇಗಿ ಮೊಹಮ್ಮದ್ ಸಿರಾಜ್ ಅವರು ಇದೇ ಮೊದಲ ಸಲ ಸ್ಥಾನ ಪಡೆದುಕೊಂಡಿದ್ದಾರೆ. ಸಿ ಗ್ರೇಡ್ ನಲ್ಲಿರುವ ಇವರಿಬ್ಬರೂ ತಲಾ ಒಂದು ಕೋಟಿ ರೂಪಾಯಿ ಪಡೆಯಲಿದ್ದಾರೆ.

ADVERTISEMENT

ಕನ್ನಡಿಗ ಕೆ.ಎಲ್. ರಾಹುಲ್ ಎ ಗ್ರೇಡ್ ಮತ್ತು ಮಯಂಕ್ ಅಗರವಾಲ್ ಬಿ ಗ್ರೇಡ್‌ನಲ್ಲಿದ್ದಾರೆ. ಇವರಿಬ್ಬರೂ ಕ್ರಮವಾಗಿ ಐದು ಮತ್ತು ಮೂರು ಕೋಟಿ ಪಡೆಯುವರು.

ಗ್ರೇಡ್‌ಗಳು
ಎ ಪ್ಲಸ್ (₹ 7 ಕೋಟಿ):
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್‌ಪ್ರೀತ್ ಬೂಮ್ರಾ
ಎ (₹ 5 ಕೋಟಿ): ಆರ್. ಅಶ್ವಿನ್, ರವೀಂದ್ರ ಜಡೇಜ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶಿಖರ್ ಧವನ್, ಕೆ.ಎಲ್. ರಾಹುಲ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ
ಬಿ (₹ 3 ಕೋಟಿ): ವೃದ್ಧಿಮಾನ್ ಸಹಾ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್, ಮಯಂಕ್ ಅಗರವಾಲ್
ಸಿ (₹ 1 ಕೋಟಿ): ಕುಲದೀಪ್ ಯಾದವ್, ನವದೀಪ್ ಸೈನಿ, ದೀಪಕ್ ಚಾಹರ್, ಶುಭಮನ್ ಗಿಲ್, ಹನುಮವಿಹಾರಿ, ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.