ADVERTISEMENT

ದಕ್ಷಿಣ ಆಫ್ರಿಕಾ ಪ್ರವಾಸ: ಬಿಸಿಸಿಐ ಮರುಚಿಂತನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 20:00 IST
Last Updated 26 ನವೆಂಬರ್ 2021, 20:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಾನ್ಪುರ: ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಾಣುವಿನ ಹೊಸ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಕ್ರಿಕೆಟ್‌ ತಂಡ ಮುಂದಿನ ತಿಂಗಳು ಕೈಗೊಳ್ಳಲಿರುವ ಪ್ರವಾಸದ ಕುರಿತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮರುಚಿಂತನೆ ನಡೆಸಲಿದೆ.

ಡಿಸೆಂಬರ್ 17 ರಿಂದ ದಕ್ಷಿಣ ಆಫ್ರಿಕಾದಲ್ಲಿ ಮೂರು ಟೆಸ್ಟ್, ಮೂರು ಏಕದಿನ ಮತ್ತು ನಾಲ್ಕು ಟಿ20 ಪಂದ್ಯಗಳ ಸರಣಿಗಳಲ್ಲಿ ಭಾರತ ತಂಡವು ಆಡಲಿದೆ. ಒಟ್ಟು ಏಳು ವಾರಗಳವರೆಗೆ ತಂಡವು ಅಲ್ಲಿರಲಿದೆ. ಜೋಹಾನ್ಸ್‌ಬರ್ಗ್, ಸೆಂಚುರಿಯನ್, ಪಾರ್ಲ್ ಮತ್ತು ಕೇಪ್‌ಟೌನ್‌ನಲ್ಲಿ ಪಂದ್ಯಗಳು ನಡೆಯಲಿವೆ.

ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ದಕ್ಷಿಣ ಆಫ್ರಿಕಾದ ಉತ್ತರ ಭಾಗದಲ್ಲಿರುವ ಜೋಹಾನ್ಸ್‌ಬರ್ಗ್ ಮತ್ತು ಪ್ರಿಟೊರಿಯಾದಲ್ಲಿ ಪಂದ್ಯಗಳನ್ನು ನಡೆಸುವುದು ಸುರಕ್ಷಿತವೇ ಎಂಬ ಬಗ್ಗೆಯೂ ಬಿಸಿಸಿಐ ಕಳವಳ ವ್ಯಕ್ತಪಡಿಸಿದೆ.

ADVERTISEMENT

‘ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಪ್ರವಾಸದ ಕುರಿತು ಖಚಿತ ನಿರ್ಧಾರ ಕೈಗೊಳ್ಳಲಾಗುವುದು. ಆಟಗಾರರು, ಸಿಬ್ಬಂದಿಗಳ ಸುರಕ್ಷತೆ ಮುಖ್ಯ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.