ADVERTISEMENT

ಮೊಹಾಲಿಯಲ್ಲಿ ವಿರಾಟ್‌ ಕೊಹ್ಲಿ ಟೆಸ್ಟ್ ‘ಶತಕ’

ಭಾರತ–ಶ್ರೀಲಂಕಾ ಸರಣಿಯ ವೇಳಾಪಟ್ಟಿ ಬದಲು; ಮಾರ್ಚ್ 12ರಿಂದ ಬೆಂಗಳೂರು ಟೆಸ್ಟ್ ಮೊದಲು ಟಿ20 ಪಂದ್ಯಗಳು

ಪಿಟಿಐ
Published 15 ಫೆಬ್ರುವರಿ 2022, 19:45 IST
Last Updated 15 ಫೆಬ್ರುವರಿ 2022, 19:45 IST
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ   

ನವದೆಹಲಿ: ಭಾರತ ಕ್ರಿಕೆಟ್ ತಂಡದ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದ ನೂರನೇ ಟೆಸ್ಟ್‍ಪಂದ್ಯವನ್ನು ಮೊಹಾಲಿಯಲ್ಲಿ ಆಡಲಿದ್ದಾರೆ.

ಮಾರ್ಚ್ 4ರಿಂದ 8ರವರೆಗೆ ನಡೆಯುವ ಭಾರತ ಮತ್ತು ಶ್ರೀಲಂಕಾ ಎದುರಿನ ಸರಣಿಯ ಮೊದಲ ಪಂದ್ಯವು ಕೊಹ್ಲಿಗೆ ಮೈಲುಗಲ್ಲಾಗಲಿದೆ. ಎರಡನೇ ಪಂದ್ಯವು ಬೆಂಗಳೂರಿನಲ್ಲಿ ನಡೆಯಲಿದೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಮಂಗಳವಾರ ಸರಣಿಯ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹಿಂದೆ ನೀಡಿದ್ದ ವೇಳಾಪಟ್ಟಿಯಲ್ಲಿ ಮೊದಲು ಟೆಸ್ಟ್ ಸರಣಿ ನಂತರ ಟಿ20 ಸರಣಿ ನಡೆಸಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಈಗ ಮೂರು ಟಿ20 ಪಂದ್ಯಗಳ ಸರಣಿ ಮೊದಲು ನಡೆಯಲಿದೆ.

ADVERTISEMENT

ಇದೇ 25ರಂದು ಲಖನೌನಲ್ಲಿ, 26 ಮತ್ತು 27ರಂದು ಧರ್ಮಶಾಲಾದಲ್ಲಿ ಪಂದ್ಯಗಳು ನಡೆಯಲಿವೆ.

ಮಾರ್ಚ್‌ ನಾಲ್ಕರಿಂದ ಮೊದಲ ಟೆಸ್ಟ್ ಮತ್ತು 12 ರಿಂದ ಎರಡನೇ ಟೆಸ್ಟ್ ಪಂದ್ಯ ನಡೆಯುವುದು.ಇದರಲ್ಲಿ ಯಾವ ಟೆಸ್ಟ್ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿದೆ ಎಂಬುದು ಸ್ಪಷ್ಟವಾಗಿಲ್ಲ.

ಈಚೆಗೆ ದಕ್ಷಿಣ ಆಫ್ರಿಕಾ ಎದುರಿನ ಸರಣಿಯ ನಂತರ ವಿರಾಟ್ ನಾಯಕತ್ವಕ್ಕೆ ದಿಢೀರ್ ರಾಜೀನಾಮೆ ನೀಡಿದ್ದರು. ಭಾರತ ತಂಡದ ಅತ್ಯಂತ ಯಶಸ್ವಿ ನಾಯಕ ಅವರಾಗಿದ್ದಾರೆ. ಅವರ ನಾಯಕತ್ವದಲ್ಲಿ ತಂಡವು 40 ಜಯ, 11 ಡ್ರಾ ಮತ್ತು 17 ಸೋಲುಗಳನ್ನು ಕಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.