ADVERTISEMENT

ಎರಡನೇ ಬಾರಿಗೆ ಯಶಸ್ವಿ ಆ್ಯಂಜಿಯೊಪ್ಲಾಸ್ಟಿಗೊಳಗಾದ ಸೌರವ್ ಗಂಗೂಲಿ

ಏಜೆನ್ಸೀಸ್
Published 28 ಜನವರಿ 2021, 13:16 IST
Last Updated 28 ಜನವರಿ 2021, 13:16 IST
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (ಸಂಗ್ರಹ ಚಿತ್ರ)
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (ಸಂಗ್ರಹ ಚಿತ್ರ)   

ಕೋಲ್ಕತ್ತ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಹಾಗೂ ಮಾಜಿ ಯಶಸ್ವಿ ನಾಯಕ ಸೌರವ್ ಗಂಗೂಲಿ ಅವರು ಗುರುವಾರ ಎರಡನೇ ಬಾರಿಗೆ ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆಗೊಳಗಾದರು.

48 ವರ್ಷದ ಸೌರವ್ ಗಂಗೂಲಿಗೆ ಗುರುವಾರದಂದು ಯಶಸ್ವಿಯಾಗಿ ಆ್ಯಂಜಿಯೊಪ್ಲಾಸ್ಟಿ ನಡೆಸಿರುವ ವೈದ್ಯರು, ಮತ್ತೆರಡು ಸ್ಟಂಟ್‌ ಆಳವಡಿಸಿದರು.

ಎಎನ್‌ಐ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಕುಟುಂಬದ ಆಪ್ತರು, ಸೌರವ್ ಗಂಗೂಲಿ ಯಶಸ್ವಿಯಾಗಿ ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆಗೊಳಾಗಿದ್ದು, ಎರಡು ಕಡೆ ಸ್ಟಂಟ್ ಆಳವಡಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಿದರು.

ADVERTISEMENT

ಬುಧವಾರ ಎದೆನೋವು ಕಾಣಿಸಿಕೊಂಡ ಪರಿಣಾಮ ಸೌರವ್ ಗಂಗೂಲಿ ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇದರೊಂದಿಗೆ ತಿಂಗಳೊಂದರಲ್ಲಿ ಎರಡನೇ ಬಾರಿಗೆ ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆಗೊಳಾಗಿದ್ದಾರೆ.

ಗುರುವಾರ ವುಡ್‌ಲ್ಯಾಂಡ್ ಆಸ್ಪತ್ರೆಯಿಂದ ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಅಪೊಲೊ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆಯ ಬಳಿಕ ವೈದ್ಯಕೀಯ ತಂಡವು ಆ್ಯಂಜಿಯೊಪ್ಲಾಸ್ಟಿ ನಡೆಸಲು ನಿರ್ಧರಿಸಿದ್ದರು.

ಈ ಹಿಂದೆ ಜನವರಿ 2ರಂದು ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಸೌರವ್ ಗಂಗೂಲಿ ಅವರ ಹೃದಯದ ರಕ್ತನಾಳಗಳಲ್ಲಿ ಬ್ಲಾಕ್‌ಗಳು ಕಂಡುಬಂದ ಕಾರಣ ಆ್ಯಂಜಿಯೊಪ್ಲಾಸ್ಟಿ ನಡೆಸಿ ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು. ಬಳಿಕ ಚೇತರಿಸಿಕೊಂಡು ಜ.7ರಂದು ಬಿಡುಗಡೆಯಾಗಿದ್ದರು.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯವನ್ನು ವಿಚಾರಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.