ADVERTISEMENT

ಮುಂದಿನ ವರ್ಷದಿಂದ ಐಪಿಎಲ್‌ಗಿಲ್ಲ ಅದ್ದೂರಿ ಉದ್ಘಾಟನೆ: ಹಣ ವ್ಯರ್ಥ ಎಂದ ಬಿಸಿಸಿಐ

ಏಜೆನ್ಸೀಸ್
Published 6 ನವೆಂಬರ್ 2019, 12:38 IST
Last Updated 6 ನವೆಂಬರ್ 2019, 12:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ:ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಅದ್ದೂರಿ ಉದ್ಘಾಟನಾ ಸಮಾರಂಭವನ್ನು ಸ್ಥಗಿತಗೊಳಿಸಲುಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ಧರಿಸಿದೆ.

ಇತ್ತೀಚೆಗೆ ನಡೆಸಿದ ಐಪಿಎಲ್ ಆಡಳಿತ ಮಂಡಳಿಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದುಬಿಸಿಸಿಐ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿದಿ ಇಂಡಿಯನ್ ಎಕ್ಸ್‌ಪ್ರೆಸ್ವರದಿ ಮಾಡಿದೆ.

‘ಉದ್ಘಾಟನಾ ಸಮಾರಂಭಗಳಿಂದ ಹಣ ವ್ಯರ್ಥ. ಅದರ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಆಸಕ್ತಿ ಹೊಂದಿದಂತಿಲ್ಲ. ಸಮಾರಂಭದಲ್ಲಿ ಪ್ರದರ್ಶನ ನೀಡುವವರಿಗೆ ಹೆಚ್ಚು ಹಣ ನೀಡಬೇಕಾಗುತ್ತದೆ’ ಎಂದುಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಉದ್ಘಾಟನಾ ಸಮಾರಂಭವನ್ನು ಅದ್ದೂರಿಯಾಗಿ ಆಯೋಜಿಸಲಾಗುತ್ತಿದ್ದು ಬಾಲಿವುಡ್ ತಾರೆಯರು, ವಿದೇಶಿ ಪಾಪ್‌ ಗಾಯಕರನ್ನು ಕರೆಸಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ವರ್ಷ ಫೆಬ್ರುವರಿಯಲ್ಲಿ ಪುಲ್ವಾಮಾದಲ್ಲಿ ಸೇನಾ ಪಡೆಗಳ ಮೇಲೆ ಉಗ್ರ ದಾಳಿ ನಡೆದ ಹಿನ್ನೆಲೆಯಲ್ಲಿ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಲಾಗಿತ್ತು. ಹುತಾತ್ಮ ಯೋಧರ ಕುಟುಂಬಗಳಿಗೆ ನೆರವಾಗುವ ಸಲುವಾಗಿ ಸಮಾರಂಭಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಸಶಸ್ತ್ರ ಪಡೆಗಳಿಗೆ ನೀಡಲಾಗಿತ್ತು.

ಉದ್ಘಾಟನಾ ಸಮಾರಂಭಕ್ಕೆಂದು ಮೀಸಲಿಟ್ಟಿದ್ದ ₹20 ಕೋಟಿ ಪೈಕಿ ಭಾರತೀಯ ಸೇನೆಗೆ₹11 ಕೋಟಿ, ಸಿಆರ್‌ಪಿಎಫ್‌ಗೆ ₹7 ಕೋಟಿ, ನೌಕಾಪಡೆ ಮತ್ತು ವಾಯುಪಡೆಗೆ ತಲಾ ₹1 ಕೋಟಿ ನೀಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.