ADVERTISEMENT

ಅಂಧ ಮಹಿಳೆಯರ ರಾಷ್ಟ್ರೀಯ ಕ್ರಿಕೆಟ್‌ ಟೂರ್ನಿ: ಫೈನಲ್‌ಗೆ ಕರ್ನಾಟಕ, ಒಡಿಶಾ

ಅಂಧ ಮಹಿಳೆಯರ ರಾಷ್ಟ್ರೀಯ ಕ್ರಿಕೆಟ್‌ ಟೂರ್ನಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2023, 14:29 IST
Last Updated 12 ಜನವರಿ 2023, 14:29 IST
ಗಂಗಾ
ಗಂಗಾ   

ಬೆಂಗಳೂರು: ಗಂಗಾ (ಅಜೇಯ 62) ಮತ್ತು ವರ್ಷಾ (ಅಜೇಯ 36) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡವು ಇಂಡಸ್ ಇಂಡ್ ಬ್ಯಾಂಕ್ ಅಂಧ ಮಹಿಳೆಯರ ರಾಷ್ಟ್ರೀಯ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ತಲುಪಿತು.

ಅಲ್ಟಾಯರ್ ಸ್ಪೋರ್ಟ್ಸ್ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ 10 ವಿಕೆಟ್‌ಗಳಿಂದ ದೆಹಲಿ ತಂಡಕ್ಕೆ ಸೋಲುಣಿಸಿತು. ಶುಕ್ರವಾರ ನಡೆಯಲಿರುವ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ತಂಡವು ಒಡಿಶಾ ಸವಾಲನ್ನು ಎದುರಿಸಲಿದೆ.

ನಾಲ್ಕರ ಘಟ್ಟದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದೆಹಲಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ ಕೇವಲ 98 ರನ್ ಗಳಿಸಿತು. ಕರ್ನಾಟಕ ತಂಡ ಕೇವಲ 8 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ ಗೆಲುವು ಸಾಧಿಸಿತು.

ADVERTISEMENT

ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಒಡಿಶಾ ತಂಡ 10 ವಿಕೆಟ್‌ಗಳಿಂದ ಆಂಧ್ರ ತಂಡವನ್ನು ಸೋಲಿಸಿ ಪ್ರಶಸ್ತಿ ಸುತ್ತು ಪ್ರವೇಶಿಸಿತು.

ಸಂಕ್ಷಿಪ್ತ ಸ್ಕೋರ್
ಹಲಿ: 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 98 (ದೀಪಮಾಲಾ ಕುಮಾರಿ 32, ನುರಿ 18; ಕಾವ್ಯ 25ಕ್ಕೆ 1).
ಕರ್ನಾಟಕ: 8 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 99 (ಗಂಗಾ ಔಟಾಗದೆ 62, ವರ್ಷಾ ಔಟಾಗದೆ 36).

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.