ಇಸ್ಲಾಮಾಬಾದ್: ಟಿ20 ವಿಶ್ವಕಪ್‌ಗೆ ಪಾಕಿಸ್ತಾನದ ತಂಡವನ್ನು ಪ್ರಕಟಿಸಿರುವ ಆಯ್ಕೆಗಾರರನ್ನು ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಮೀರ್ ಗೇಲಿ ಮಾಡಿದ್ದಾರೆ.
ಅಕ್ಟೋಬರ್ 16 ರಿಂದ ನವೆಂಬರ್ 13 ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಪುರುಷರ ‘ಟಿ20 ವಿಶ್ವಕಪ್–2022’ಗೆ ‘ಪಾಕಿಸ್ತಾನ ಕ್ರಿಕೆಟ್ ಮಂಡಳಿ’ಯು ಗುರುವಾರ ತಂಡವನ್ನು ಪ್ರಕಟಿಸಿದೆ. ಮುಖ್ಯ ಆಯ್ಕೆಗಾರ ಮೊಹಮ್ಮದ್ ವಾಸಿಂ ನೇತೃತ್ವದ ಸಮಿತಿಯು 15 ಆಟಗಾರರನ್ನು ಹೆಸರಿಸಿದೆ.
ಅತ್ತ ಪಿಸಿಬಿಯ ಆಯ್ಕೆ ಸಮಿತಿ ತಂಡವನ್ನು ಪ್ರಕಟ ಮಾಡುತ್ತಲೇ ಇತ್ತ ಟ್ವಿಟರ್‌ನಲ್ಲಿ ಮೂದಲಿಕೆ ಮಾಡಿರುವ ಅಮೀರ್ ‘ಚೀಫ್ ಸೆಲೆಕ್ಟರ್ ಕಿ ಚೀಪ್ ಸೆಲೆಕ್ಷನ್ (ಮುಖ್ಯ ಆಯ್ಕೆಗಾರರ ಕಳಪೆ ಆಯ್ಕೆ)’ ಎಂದು ವ್ಯಂಗ್ಯವಾಡಿದ್ದಾರೆ.
ಪಾಕಿಸ್ತಾನ ತಂಡದ ಎಡಗೈ ವೇಗಿ ಮೊಹಮ್ಮದ್ ಅಮೀರ್ 2020ರಲ್ಲಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಅಮೀರ್ 2010ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು.
ಟಿ20 ವಿಶ್ವಕಪ್‌ಗೆ ಪಾಕ್ ತಂಡ
ಬಾಬರ್ ಆಜಂ (ನಾಯಕ), ಶದಾಬ್ ಖಾನ್ (ಉಪ ನಾಯಕ), ಆಸಿಫ್ ಅಲಿ, ಹೈದರ್ ಅಲಿ, ಹಾರಿಸ್ ರವುಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ಹಸ್‌ನೈನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಮ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ, ಶಾನ್ ಮಸೂದ್, ಉಸ್ಮಾನ್ ಖಾದಿರ್.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.