ನವದೆಹಲಿ: ಕರ್ನಾಟಕದ ದೇವದತ್ತ ಪಡಿಕಲ್ ಅವರು ಏಷ್ಯಾಕಪ್ಗೆ ಪ್ರಕಟಿಸಲಾಗಿರುವ 19 ವರ್ಷದೊಳಗಿನವರ ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.
ಏಷ್ಯಾಕಪ್ ಟೂರ್ನಿ ಸೆಪ್ಟೆಂಬರ್ 29ರಿಂದ ಬಾಂಗ್ಲಾದೇಶದ ಢಾಕಾದಲ್ಲಿ ನಡೆಯಲಿದೆ.
ಎಡಗೈ ಬ್ಯಾಟ್ಸ್ಮನ್ ದೇವದತ್ತ, ಕೂಚ್ ಬೆಹಾರ್ ಟ್ರೋಫಿ ಟೂರ್ನಿಯಲ್ಲಿ ಅಮೋಘ ಆಟ ಆಡಿದ್ದರು. ಅವರು ಸೆಪ್ಟೆಂಬರ್ನಲ್ಲಿ ಲಖನೌದಲ್ಲಿ ನಡೆಯುವ ಚತುಷ್ಕೋನ ಕ್ರಿಕೆಟ್ ಸರಣಿಯಲ್ಲಿ 19 ವರ್ಷದೊಳಗಿನವರ ಭಾರತ ‘ಎ’ ತಂಡದಲ್ಲಿ ಆಡುವ ಅವಕಾಶ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.