ಬೆಂಗಳೂರು: ದಿಗ್ಗಜ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಮತ್ತು ಜಾವಗಲ್ ಶ್ರೀನಾಥ್ ಅವರು ಬುಧವಾರ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಯಲ್ಲಿ ನಡೆದ ರೆಫರಿಗಳ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಈ ಹಿಂದೆ ಭಾರತ ತಂಡದ ನಾಯಕರು ಮತ್ತು ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿರುವ ದ್ರಾವಿಡ್, ಕುಂಬ್ಳೆ ಮತ್ತು ಪ್ರಸ್ತುತ ಐಸಿಸಿ ರೆಫರಿ ಆಗಿರುವ ಶ್ರೀನಾಥ್ ಅವರು ರೆಫರಿಗಳಿಗೆ ಮಾರ್ಗದರ್ಶನ ನೀಡಿದರು.
ದೇಶಿ ಕ್ರಿಕೆಟ್ ರೆಫರಿಗಳು ಭಾಗವಹಿಸಿದ್ದರು. ಇದರಲ್ಲಿ ಅನುಭವಿ ರೆಫರಿ ಮನು ನಯ್ಯರ್ ಕೂಡ ಇದ್ದರು.
ಎಲೀಟ್ ಪ್ಯಾನೆಲ್ ಅಂಪೈರ್ ನಿತಿನ್ ಮೆನನ್, ಎನ್‌ಸಿಎ ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಸುಜಿತ್ ಸೋಮಸುಂದರ್ ಅವರು ಸಂವಾದ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.