ಅಬುದಾಬಿ: ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ವೇಳೆ ಫಫ್ ಡುಪ್ಲೆಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಮರಳುವ ಸೂಚನೆ ನೀಡಿದ್ದಾರೆ.
ಈ ಸಂಬಂಧ ಕಳೆದೆರಡು ವರ್ಷಗಳಿಂದ ದಕ್ಷಿಣ ಆಫ್ರಿಕಾ ತಂಡದ ಕೋಚ್ ರಾಬ್ ವಾಲ್ಟರ್ ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ಡುಪ್ಲಸಿ ತಿಳಿಸಿದ್ದಾರೆ.
2020ನೇ ಇಸವಿಯಲ್ಲಿ ಡುಪ್ಲೆಸಿ ಕೊನೆಯದಾಗಿ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ ಆಡಿದ್ದರು. ಅಲ್ಲದೆ 2021ರಲ್ಲಿ ಪಾಕಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ ಪರ ಕೊನೆಯದಾಗಿ ಟೆಸ್ಟ್ ಪಂದ್ಯ ಆಡಿದ್ದರು.
ನಾನು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ನಿರೀಕ್ಷೆಯಲ್ಲಿದ್ದೇನೆ ಎಂದು ಎಂದು ಅಬುದಾಬಿ ಟಿ10 ಲೀಗ್ ವೇಳೆ 39 ವರ್ಷದ ಡುಪ್ಲೆಸಿ ತಿಳಿಸಿದ್ದಾರೆ.
ಐಪಿಎಲ್ ಸೇರಿದಂತೆ ಜಗತ್ತಿನ ಹಲವು ಟ್ವೆಂಟಿ-20 ಕ್ರಿಕೆಟ್ ಲೀಗ್‌ಗಳಲ್ಲಿ ಭಾಗವಹಿಸುತ್ತಿರುವ ಡುಪ್ಲೆಸಿ ಉತ್ತಮ ಲಯ ಕಾಪಾಡಿಕೊಂಡಿದ್ದಾರೆ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿರುವ ಡುಪ್ಲೆಸಿ, ಈ ಸಲ 14 ಪಂದ್ಯಗಳಲ್ಲಿ 730 ರನ್ ಗಳಿಸಿದ್ದರು. ಆ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪೈಕಿ ಎರಡನೇ ಸ್ಥಾನ ಪಡೆದಿದ್ದರು.
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯು ಮುಂದಿನ ವರ್ಷ ವೆಸ್ಟ್‌ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.