ನವದೆಹಲಿ: ಅನುಭವಿ ಬೌಲರ್ ಜೂಲನ್ ಗೋಸ್ವಾಮಿ ಭಾರತ ಏಕದಿನ ಮಹಿಳಾ ಕ್ರಿಕೆಟ್ ತಂಡಕ್ಕೆ ಮರಳಿದ್ದಾರೆ.
ಸೆಪ್ಟೆಂಬರ್ 10ರಿಂದ ಇಂಗ್ಲೆಂಡ್‌ನಲ್ಲಿ ಸೀಮಿತ ಓವರ್‌ಗಳ ಸರಣಿ ಆರಂಭವಾಗಲಿದೆ. ಅದರಲ್ಲಿ ಮೂರು ಏಕದಿನ ಪಂದ್ಯಗಳಲ್ಲಿ 40 ವರ್ಷದ ಜೂಲನ್ ಆಡಲಿದ್ದಾರೆ. ಈ ಪ್ರವಾಸದಲ್ಲಿ ಮೂರು ಟಿ20 ಪಂದ್ಯಗಳ ಸರಣಿಯೂ ನಡೆಯಲಿದೆ. ಶುಕ್ರವಾರ ಬಿಸಿಸಿಐ ಆಯ್ಕೆ ಸಮಿತಿಯು ಏಕದಿನ ಹಾಗೂ ಟಿ20 ತಂಡಗಳನ್ನು ಪ್ರಕಟಿಸಿದ್ದಾರೆ.
ಟಿ20 ತಂಡದಲ್ಲಿ ಹೊಸಪ್ರತಿಭೆ ಕೆ.ಪಿ. ನವಗಿರೆ, ವಿಕೆಟ್‌ಕೀಪರ್ ರಿಚಾ ಘೋಷ್ ಹಾಗೂ ರಾಧಾ ಯಾದವ್ ಸ್ಥಾನ ಪಡೆದಿದ್ದಾರೆ. ಇವರು ಏಕದಿನ ಬಳಗದಲ್ಲಿ ಇಲ್ಲ.
ಎರಡೂ ಸರಣಿಗಳಲ್ಲಿ ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸುವರು.
ತಂಡ:
ಏಕದಿನ ಕ್ರಿಕೆಟ್: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ,ಜೂಲನ್ ಗೋಸ್ವಾಮಿ, ಸಬ್ಬಿನೇನಿ ಮೇಘನಾ, ದೀಪ್ತಿ ಶರ್ಮಾ, ತಾನಿಯಾ ಭಾಟಿಯಾ (ವಿಕೆಟ್‌ಕೀಪರ್), ಯಷ್ಟಿಕಾ ಭಾಟಿಯಾ (ವಿಕೆಟ್‌ಕೀಪರ್), ಪೂಜಾ ವಸ್ತ್ರಕರ್, ಸ್ನೇಹಾ ರಾಣಾ, ರೇಣುಕಾ ಠಾಕೂರ್, ಮೇಘನಾ ಸಿಂಗ್, ರಾಜೇಶ್ವರಿ ಗಾಯಕವಾಡ, ಹರ್ಲಿನ್ ಡಿಯೊಲ್, ದಯಾಳನ್ ಹೇಮಲತಾ, ಸಿಮ್ರನ್ ದಿಲ್ ಬಹಾದ್ದೂರ್, ಜೆಮಿಮಾ ರಾಡ್ರಿಗಸ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.