ADVERTISEMENT

ಕರುಣ್‌, ರಾಹುಲ್‌ಗೆ ಸ್ಥಾನ

ದೆಹಲಿಯ ರಿಷಭ್ ಪಂತ್‌ಗೆ ಅವಕಾಶ: ರೋಹಿತ್‌, ವೃದ್ಧಿಮಾನ್‌ ಸಹಾ ಅಲಭ್ಯ

​ಪ್ರಜಾವಾಣಿ ವಾರ್ತೆ
Published 18 ಜುಲೈ 2018, 19:31 IST
Last Updated 18 ಜುಲೈ 2018, 19:31 IST
ರಿಷಭ್ ಪಂತ್
ರಿಷಭ್ ಪಂತ್   

ನವದೆಹಲಿ (ಪಿಟಿಐ): ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಿಗೆ 18 ಸದಸ್ಯರ ತಂಡವನ್ನು ಪ್ರಕಟಿಸಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಆಯ್ಕೆ ಸಮಿತಿ, ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಅವರಿಗೆ ಸ್ಥಾನ ನೀಡಿದೆ.

ಕರ್ನಾಟಕದ ಕೆ.ಎಲ್‌.ರಾಹುಲ್ ಮತ್ತು ಕರುಣ್ ನಾಯರ್ ಅವರಿಗೂ ಸ್ಥಾನ ಲಭಿಸಿದೆ. ಆದರೆ ರೋಹಿತ್ ಶರ್ಮಾ ಅವರನ್ನು ಕೈಬಿಡಲಾಗಿದೆ. ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅವರಿಗೂ ಅವಕಾಶ ಸಿಗಲಿಲ್ಲ.

ವೇಗದ ಬೌಲರ್‌ ಮೊಹಮ್ಮದ್ ಶಮಿಗೆ ಸ್ಥಾನ ನೀಡಿರುವ ಆಯ್ಕೆ ಮಂಡಳಿ ಬೆನ್ನು ನೋವಿನಿಂದ ಬಳಲುತ್ತಿರುವ ಭುವನೇಶ್ವರ್ ಕುಮಾರ್‌ ಅವರನ್ನು ಕೈಬಿಡಲು ನಿರ್ಧರಿಸಿದೆ. ಜಸ್‌ಪ್ರೀತ್ ಬೂಮ್ರಾ ಅವರನ್ನು ಎರಡನೇ ಪಂದ್ಯದ ನಂತರ ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್‌, ಕೆ.ಎಲ್‌.ರಾಹುಲ್‌, ಮುರಳಿ ವಿಜಯ್‌, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪ ನಾಯಕ), ಕರುಣ್ ನಾಯರ್‌, ದಿನೇಶ್‌ ಕಾರ್ತಿಕ್‌, ರಿಷಭ್ ಪಂತ್‌ (ಇಬ್ಬರೂ ವಿಕೆಟ್‌ ಕೀಪರ್‌ಗಳು), ರವಿಚಂದ್ರನ್ ಅಶ್ವಿನ್‌, ರವೀಂದ್ರ ಜಡೇಜ, ಕುಲದೀ‍ಪ್ ಯಾದವ್, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್‌ಪ್ರೀತ್ ಬೂಮ್ರಾ, ಶಾರ್ದೂಲ್ ಠಾಕೂರ್‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.