ನವದೆಹಲಿ: ಭಾರತ ಕ್ರಿಕೆಟ್ ತಂಡಕ್ಕೆ ಫಿಸಿಯೊ ಆಗಿದ್ದ ಪ್ಯಾಟ್ರಿಕ್ ಫರ್ಹಾರ್ಟ್ ಶುಕ್ರವಾರ ಐಪಿಎಲ್ ಫ್ರಾಂಚೈಸ್ ಡೆಲ್ಲಿ ಕ್ಯಾಪಿಟಲ್ಸ್ ಜೊತೆ ಮೂರು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಫರ್ಹಾರ್ಟ್ 2015ರಿಂದ ನಾಲ್ಕು ವರ್ಷ ಭಾರತ ತಂಡ ದೊಂದಿಗೆ ಕೆಲಸ ಮಾಡಿದ್ದರು. 2019ರ ಭಾರತ–ನ್ಯೂಜಿಲೆಂಡ್ ವಿಶ್ವಕಪ್ ಸೆಮಿಫೈನಲ್ ಪಂದ್ಯದ ಬಳಿಕ ಫಿಸಿಯೊ ಸ್ಥಾನ ತೊರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.