ಸಿಡ್ನಿ: ಭಾರತ ಕ್ರಿಕೆಟ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಪ್ರಮುಖ ಪಂದ್ಯದಲ್ಲಿ, ಒಂದು ವರ್ಷದ ಬಳಿಕ ಬೌಲಿಂಗ್ ಮಾಡಿದರು. ಬೆನ್ನುನೋವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ವರ್ಷದಿಂದ ಬೌಲ್ ಮಾಡಿರಲಿಲ್ಲ. ಭಾನುವಾರ ಆಸ್ಟ್ರೇಲಿಯಾ ಎದುರು ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಅವರು ನಾಲ್ಕು ಓವರ್ ಎಸೆದರು.
ದೇಹದ ಮೇಲೆ ಬೀಳುವ ಒತ್ತಡವನ್ನು ಕಡಿಮೆ ಮಾಡಲು ಬೌಲಿಂಗ್ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡಿರುವ ಪಾಂಡ್ಯ, ಸೂಕ್ತ ಸಮಯದಲ್ಲಿ ಪ್ರಮುಖ ಪಂದ್ಯಗಳಲ್ಲಿ ಮಾತ್ರ ಬೌಲಿಂಗ್ ಮಾಡುವುದಾಗಿ ಹೇಳಿದ್ದರು.
ಪಂದ್ಯದಲ್ಲಿ ತನ್ನ ಮೊದಲ ಓವರ್‌ಅನ್ನು ಎಸೆದ ಪಾಂಡ್ಯ, ಐದು ರನ್ ನೀಡಿದರು. ನಾಲ್ಕು ಓವರ್‌ಗಳಲ್ಲಿ ಕೇವಲ 24 ರನ್ ನೀಡಿದರು. ಮೂರನೇ ಓವರ್‌ನಲ್ಲಿ ಸ್ಟೀವನ್ ಸ್ಮಿತ್ ಅವರ ವಿಕೆಟ್ ಕೂಡ ಗಳಿಸಿದರು.
ಹಾರ್ದಿಕ್ ಅವರು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಇಂಗ್ಲೆಂಡ್‌ನಲ್ಲಿ ಬೆನ್ನುನೋವಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.