ದುಬೈ: ಹಿನ್ನಡೆಗಿಂತ ಪುನರಾಗಮನ ದೊಡ್ಡದು ಎಂದು ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಹಾರ್ದಿಕ್ ಪಾಂಡ್ಯ ಆಲ್‌ರೌಂಡ್ ಆಟ ಪ್ರದರ್ಶಿಸಿದ್ದರು.
ಬೌಲಿಂಗ್‌ನಲ್ಲಿ 3 ವಿಕೆಟ್ ಪಡೆದು ಪಾಕಿಸ್ತಾನಕ್ಕೆ ಹಿನ್ನಡೆ ಉಂಟುಮಾಡಿದ್ದ ಪಾಂಡ್ಯ, ಅಜೇಯ 33 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಕೆಲ ವರ್ಷಗಳ ಹಿಂದೆ ತಾವು ಗಾಯಗೊಂಡು ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ನಿರ್ಗಮಿಸಿದ್ದ ಮತ್ತು ಭಾನುವಾರದ ಪಂದ್ಯದಲ್ಲಿ ಗೆಲುವಿನ ಸಂಭ್ರಮ ಆಚರಿಸುತ್ತಿರುವ ಚಿತ್ರಗಳನ್ನು ಟ್ವೀಟ್ ಮಾಡಿರುವ ಪಾಂಡ್ಯ, ‘ಹಿನ್ನಡೆಗಿಂತ ಪುನರಾಗಮನ ದೊಡ್ಡದು’ ಎಂದು ಬರೆದುಕೊಂಡಿದ್ದಾರೆ.
ಭಾನುವಾರದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕ್ ತಂಡ 19.5 ಓವರ್‌ಗಳಲ್ಲಿ 147 ರನ್‌ಗಳಿಗೆ ಆಲೌಟ್ ಆಗಿತ್ತು. ಭಾರತ 19.4 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟದೊಂದಿಗೆ ಯಶಸ್ವಿಯಾಗಿ ಗುರಿಮುಟ್ಟಿತ್ತು. ಮೂರು ವಿಕೆಟ್ ಮತ್ತು 17 ಬಾಲ್‌ಗಳಿಂದ ಅಜೇಯ 33 ರನ್ ಗಳಿಸಿದ ಹಾರ್ದಿಕ್ ಪಾಂಡ್ಯ ಪಂದ್ಯಶ್ರೇಷ್ಠರೆನಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.