ಮೆಲ್ಬರ್ನ್: ಆಸ್ಟ್ರೇಲಿಯಾದ ಹಿರಿಯ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಅವರು ಸರ್ಫಿಂಗ್ (ಹಾಯಿ ದೋಣಿ ಸವಾರಿ) ಮಾಡುವಾಗ ಆಪಘಾತಕ್ಕೀಡಾಗಿದ್ದಾರೆ.
ಇದರಿಂದಾಗಿ ಅವರ ಕತ್ತಿನ ಮೂಳೆ ಮುರಿದಿದ್ದು, ಮುಖಕ್ಕೆ ತೀವ್ರ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಸಂಜೆ ತಮ್ಮ ಮಗನೊಂದಿಗೆ ಅವರು ಸರ್ಫಿಂಗ್ ವಿಹಾರಕ್ಕೆ ತೆರಳಿದ್ದರು.ಅವರು ಇನ್ನೂ ಕೆಲವು ದಿನಗಳವರೆಗೆ ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.